Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲ್ ಫಲಾಹ್ ವಿಶ್ವವಿದ್ಯಾಲಯವನ್ನು ತನ್ನ ಸುಪರ್ದಿಗೆ ಪಡೆದ ಹರಿಯಾಣ ಸರ್ಕಾರ – ಆಡಳಿತಾಧಿಕಾರಿಗಳ ನೇಮಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಲ್ ಫಲಾಹ್ ವಿಶ್ವವಿದ್ಯಾಲಯವನ್ನು ತನ್ನ ಸುಪರ್ದಿಗೆ ಪಡೆದ ಹರಿಯಾಣ ಸರ್ಕಾರ – ಆಡಳಿತಾಧಿಕಾರಿಗಳ ನೇಮಕ

Latest

ಅಲ್ ಫಲಾಹ್ ವಿಶ್ವವಿದ್ಯಾಲಯವನ್ನು ತನ್ನ ಸುಪರ್ದಿಗೆ ಪಡೆದ ಹರಿಯಾಣ ಸರ್ಕಾರ – ಆಡಳಿತಾಧಿಕಾರಿಗಳ ನೇಮಕ

Public TV
Last updated: March 21, 2026 12:46 pm
Public TV
Share
3 Min Read
Al Falah University
SHARE

ಚಂಡೀಗಢ: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ (Delhi Red Fort Blast) ಅಲ್-ಫಲಾಹ್ ವಿಶ್ವವಿದ್ಯಾಲಯದ (Al-Falah University) ಮೂವರು ವೈದ್ಯರ ಭಾಗಿಯಾಗಿದ್ದು ಗೊತ್ತಾದ ಬಳಿಕ ಅತಂತ್ರಕ್ಕೊಳಗಾಗಿದ್ದ ವಿವಿಯನ್ನು ಹರಿಯಾಣ (Haryana) ಸರ್ಕಾರ ತನ್ನ ಸುಪರ್ದಿಗೆ ಪಡೆದಿದೆ. ಇನ್ನು ಮುಂದೆ ಅಲ್-ಫಲಾಹ್ ವಿಶ್ವವಿದ್ಯಾಲಯವನ್ನು ಸರ್ಕಾರ ನೇಮಿಸಿದ ಆಡಳಿತಾಧಿಕಾರಿಗಳು ಮುನ್ನೆಡೆಸಲಿದ್ದಾರೆ.

ತನಿಖೆಯಲ್ಲಿ ವಿದ್ಯಾಲಯದ ನಿರ್ವಹಣೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಮತ್ತು ಅಕ್ರಮಗಳು ಕಂಡುಬಂದಿವೆ. ಇದೇ ಕಾರಣಕ್ಕೆ ಹರಿಯಾಣ ಸರ್ಕಾರ ಮಧ್ಯಪ್ರವೇಶಿಸಿದೆ. ಹಿರಿಯ ಐಎಎಸ್ ಅಧಿಕಾರಿ ಅಮಿತ್ ಅಗರ್ವಾಲ್ ಅವರನ್ನು ಅಲ್-ಫಲಾಹ್‌ನಲ್ಲಿ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಬುಧವಾರ (ಮಾ.18) ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯ ಆಯುಕ್ತ ಮತ್ತು ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿರುವ ಅವರು ವಿಶ್ವವಿದ್ಯಾಲಯದ ಹಣಕಾಸು ಮತ್ತು ಆಡಳಿತ ವ್ಯವಹಾರಗಳನ್ನು ಅಹ ನೋಡಿಕೊಳ್ಳಲಿದ್ದಾರೆ. ಇದನ್ನೂ ಓದಿ: ದೆಹಲಿ ಸ್ಫೋಟ ಪ್ರಕರಣ – ಅಲ್ ಫಲಾಹ್‌ ವಿವಿಯ ಶಾಹಿನಾ ರೂಮ್‌ನಲ್ಲಿ 18 ಲಕ್ಷ ನಗದು ಪತ್ತೆ

ವಿಶ್ವವಿದ್ಯಾನಿಲಯದ 1,700 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಶೈಕ್ಷಣಿಕ ಕೆಲಸಕ್ಕಾಗಿ ಫರಿದಾಬಾದ್‌ನ ಜೆಸಿ ಬೋಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಿಂದ ಹೆಚ್ಚುವರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಲು ತಂಡವನ್ನು ನಿಯೋಜಿಸಲಾಗಿದೆ. ಜೆಸಿ ಬೋಸ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಅಜಯ್ ರಂಗ ಅವರು ಉಪಕುಲಪತಿಯಾಗಿಯೂ ಸೇವೆ ಸಲ್ಲಿಸಲಿದ್ದಾರೆ.

Dr Shaheen Shahid
ಶಾಹೀನ್ ಶಾಹಿದ್

ಅಲ್-ಫಲಾಹ್‌ನ ಪರೀಕ್ಷಾ ನಿಯಂತ್ರಕರಾದ ರಾಜೀವ್ ಕುಮಾರ್ ಸಿಂಗ್ ಅವರು ಅದೇ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ. ರವಿ ಕುಮಾರ್ ಶರ್ಮಾ ಅವರನ್ನು ಮುಖ್ಯ ಹಣಕಾಸು ಮತ್ತು ಲೆಕ್ಕಪತ್ರ ಅಧಿಕಾರಿಯಾಗಿ ನೇಮಿಸಲಾಗಿದೆ. ಮೇಹಾ ಶರ್ಮಾ ಅವರು ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸಲಿದ್ದಾರೆ. ಅಭಿನವ್ ಮತ್ತು ರಾಜ್‌ದೀಪ್ ಅವರನ್ನು ಉಪಕುಲಪತಿ ಮತ್ತು ರಿಜಿಸ್ಟ್ರಾರ್ ಅಡಿಯಲ್ಲಿ ಆಡಳಿತಾತ್ಮಕ ಕರ್ತವ್ಯಗಳನ್ನು ಸಹ ನಿಯೋಜಿಸಲಾಗಿದೆ.

ವಿವಿಯ ಬೋಧನೆಗೆ ಯಾವುದೇ ಅಡ್ಡಿಯಾಗುವುದಿಲ್ಲ. ಅಧ್ಯಾಪಕರು ಬದಲಾಗದೆ ಅಲ್ಲಿಯೇ ಉಳಿಯಲಿದ್ದಾರೆ. ಈಗ ನಿಯೋಜಿಸಲಾದ ತಂಡವು ವಿಶ್ವವಿದ್ಯಾಲಯದ ಹಿತಾಸಕ್ತಿಗಾಗಿ ದೈನಂದಿನ ವ್ಯವಹಾರಗಳನ್ನು ನಿರ್ವಹಿಸುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖಾಸಗಿ ವಿಶ್ವವಿದ್ಯಾಲಯಗಳ ಮೇಲ್ವಿಚಾರಣೆಯನ್ನು ಬಿಗಿಗೊಳಿಸಲು ಡಿಸೆಂಬರ್ 22 ರಂದು ಹರಿಯಾಣ ವಿಧಾನಸಭೆ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಹರಿಯಾಣ ಖಾಸಗಿ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆಯು ಸೆಕ್ಷನ್ 44ಕ್ಕೆ ಹೊಸ ಷರತ್ತು ಸೇರಿಸಿದೆ. ದುರಾಡಳಿತ, ಸುಳ್ಳು ಅಥವಾ ದಾರಿತಪ್ಪಿಸುವ ಮತ್ತು ಶೈಕ್ಷಣಿಕ ಮತ್ತು ನಿಯಂತ್ರಕ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲವಾದರೆ ದಂಡವನ್ನು ವಿಧಿಸಲಾಗುತ್ತದೆ. ಈ ನಿಯಮದ ಪ್ರಕಾರ ಸರ್ಕಾರ ಈಗ ನಿರ್ದಿಷ್ಟ ಕೋರ್ಸ್‌ಗಳ ಪ್ರವೇಶವನ್ನು ನಿಲ್ಲಿಸಬಹುದಾಗಿದೆ. ನಿಯಮ ಉಲ್ಲಂಘಿಸಿದರೆ 10 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳವರೆಗೆ ದಂಡ ವಿಧಿಸಬಹುದು. ಕೆಲವು ಪ್ರಕರಣಗಳಲ್ಲಿ 30 ದಿನಗಳಲ್ಲಿ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಹಂತಹಂತವಾಗಿ ವಿಸರ್ಜನೆಗೆ ಆದೇಶಿಸಬಹುದು.

Delhi blast Case Dr. Umar Nabi visited Tablighi Jamaat mosque then went to Red Fort

ಕೆಂಪು ಕೋಟೆಯ ಬಳಿ ಸ್ಫೋಟ ಕೇಸ್‌
ಕಳೆದ ವರ್ಷ ನವೆಂಬರ್ 10 ರಂದು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಉಮರ್ ಉನ್ ನಬಿ ಕೆಂಪು ಕೋಟೆಯ ಬಳಿ ಸ್ಫೋಟಕಗಳಿಂದ ತುಂಬಿದ ಕಾರನ್ನು ಸ್ಫೋಟಿಸಿದ್ದ. ಈ ದುರಂತದಲ್ಲಿ 15 ಜನ ಸಾವಿಗೀಡಾಗಿದ್ದರು. ಈ ಬಗ್ಗೆ ತನಿಖೆ ನಡೆಸಿದಾಗ ಮತ್ತಿಬ್ಬರು ಅಧ್ಯಾಪಕ / ವೈದ್ಯರಾದ ಮುಜಮ್ಮಿಲ್ ಅಹ್ಮದ್ ಗನೈ ಮತ್ತು ಶಾಹೀನ್ ಶಾಹಿದ್ ಪಾತ್ರ ಇರುವುದು ಬಯಲಾಗಿತ್ತು. ಬಳಿಕ ಈ ಇಬ್ಬರನ್ನು ಬಂಧಿಸಲಾಯಿತು. ಪ್ರತ್ಯೇಕ ಪ್ರಕರಣದಲ್ಲಿ ಅಲ್-ಫಲಾಹ್ ಗ್ರೂಪ್‌ನ ಸ್ಥಾಪಕ ಮತ್ತು ಅಧ್ಯಕ್ಷನನ್ನು ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದೆ. 2013 ರಲ್ಲಿ ಖಾಸಗಿ ವಿಶ್ವವಿದ್ಯಾಲಯ ಕಾಯ್ದೆಯಡಿಯಲ್ಲಿ ಸ್ಥಾಪನೆಯಾದ ಅಲ್-ಫಲಾಹ್ ಇನ್ನೂ NAAC ಮಾನ್ಯತೆಯನ್ನು ಪಡೆದಿಲ್ಲ. ಇದನ್ನೂ ಓದಿ: ಅಲ್ ಫಲಾಹ್ ವಿವಿಯ 17ನೇ ಬಿಲ್ಡಿಂಗ್‌, ರೂಮ್‌ ನಂ.13ರ ರಹಸ್ಯ ಬಹಿರಂಗ – ʻಆಪರೇಷನ್‌ ಡೈರಿʼಯಲ್ಲಿ ಏನಿತ್ತು?

TAGGED:Al Falah UniversityDelhi Red Fort BlastHaryana
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
9 minutes ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
43 minutes ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
2 hours ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
2 hours ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
2 hours ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?