ಆಪರೇಷನ್‌ ಸಿಂಧೂರದ ಬಗ್ಗೆ ಪಾಕ್‌ಗೆ ಮಾಹಿತಿ ನೀಡುತ್ತಿದ್ದ ಹರಿಯಾಣದ ಯುವಕ ಅರೆಸ್ಟ್

Public TV
1 Min Read
Haryana Devendra Singh Arrested For Giving Information To Pakistan ISI

ಚಂಡೀಗಢ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಉಂಟಾಗಿರುವ ಸಂದರ್ಭದಲ್ಲಿ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐಗೆ (Pakistan ISI) ಮಾಹಿತಿ ಒದಗಿಸಿದ ಆರೋಪದ ಮೇಲೆ ಹರಿಯಾಣದ (Haryana) ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಮಸ್ತ್‌ಗಢ ಚೀಕಾ ಗ್ರಾಮದ ದೇವೇಂದ್ರ ಸಿಂಗ್ (25) ಬಂಧಿತ ಯುವಕ. ವಿಚಾರಣೆಯ ಸಂದರ್ಭದಲ್ಲಿ ದೇವೇಂದ್ರ ಸಿಂಗ್ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಸಂಪರ್ಕದಲ್ಲಿರುವುದಾಗಿ ಬಹಿರಂಗಪಡಿಸಿದ್ದಾನೆ. ದೇವೇಂದ್ರ ಸಿಂಗ್ ಆಪರೇಷನ್ ಸಿಂಧೂರ ಕಾರ್ಯಾಚರಣೆಯ (Operation Sindoor) ಬಗ್ಗೆಯೂ ಐಎಸ್‌ಐಗೆ ಕಾಲಕಾಲಕ್ಕೆ ಮಾಹಿತಿಯನ್ನು ರವಾನಿಸಿದ್ದಾನೆ. ಗುಪ್ತಚರ ಮಾಹಿತಿ ಆಧಾರದ ಮೇಲೆ ಕೈಥಲ್ ಜಿಲ್ಲಾ ಪೊಲೀಸರು ದೇವೇಂದ್ರ ಸಿಂಗ್‌ನನ್ನು ಬಂಧಿಸಿದ್ದಾರೆ ಎಂದು ಡಿಎಸ್‌ಪಿ ಕೈಥಲ್ ವೀರಭನ್ ಹೇಳಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ – ಐಪಿಎಲ್‌ಗೂ ಅಡ್ಡಿ ಸಾಧ್ಯತೆ

ಸೈಬರ್ ಪೊಲೀಸ್ ಠಾಣೆಯಲ್ಲಿ ದೇವೆಂದ್ರ ಸಿಂಗ್ ಬಳಿ ಪತ್ತೆಯಾದ ಸಾಧನಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ತನಿಖೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವೀರಭನ್ ತಿಳಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ | ಕೃಷಿಹೊಂಡದಲ್ಲಿ ಬಿದ್ದು ಬಾಲಕ ಸಾವು

ದೇವೇಂದ್ರ ಸಿಂಗ್ ಪಂಜಾಬ್‌ನ ಕಾಲೇಜುವೊಂದರಲ್ಲಿ ಎಂಎ ರಾಜ್ಯಶಾಸ್ತ್ರ ವಿದ್ಯಾರ್ಥಿಯಾಗಿದ್ದು, ಕಳೆದ ವರ್ಷ ನವೆಂಬರ್‌ನಲ್ಲಿ ಪಾಕಿಸ್ತಾನದ ನಂಕಾನಾ ಸಾಹಿಬ್ ಗುರುದ್ವಾರಕ್ಕೆ ತೀರ್ಥಯಾತ್ರೆಗೆಂದು ಹೋಗಿದ್ದ. ಈ ವೇಳೆ ಪಾಕಿಸ್ತಾನಿ ಗುಪ್ತಚರ ಏಜೆಂಟ್‌ಗಳು ಈತನೊಂದಿಗೆ ಸಂಪರ್ಕ ಸಾಧಿಸಿದ್ದಾರೆ. ಅಂದಿನಿಂದ ಪಾಕ್ ಐಎಸ್‌ಐಗೆ ದೇವೇಂದ್ರ ಸಿಂಗ್ ನಿರಂತರವಾಗಿ ಮಾಹಿತಿ ನೀಡುತ್ತಿದ್ದ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪುಣೆಯ ಐಸಿಸ್‌ ಮಾಡ್ಯೂಲ್‌ ಕೇಸ್‌ – ಇಬ್ಬರು ಉಗ್ರರ ಬಂಧನ

Share This Article