8 ಮಂದಿಯಿಂದ ಗ್ಯಾಂಗ್‌ರೇಪ್- ಸಾವು ಬದುಕಿನ ಮಧ್ಯೆ 54ರ ಮಹಿಳೆ ಹೋರಾಟ

Public TV
2 Min Read
woman 1

ಚಂಢೀಗಡ: ಉತ್ತರ ಪ್ರದೇಶದ 54 ವರ್ಷದ ಮಹಿಳೆಯೊಬ್ಬರ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರವೆಸಗಿ ಆಕೆ ಸಾವು- ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಹೀನಾಯ ಘಟನೆಯೊಂದು ಹರಿಯಾಣದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

8 ಮಂದಿ ಕಾಮುಕರು ಹರಿಯಾಣದ ಕರ್ನಾಲ್ ರೈಲ್ವೇ ಸ್ಟೇಷನ್ ನಲ್ಲಿ ಮಹಿಳೆ ಮೇಲೆ ಈ ಕೃತ್ಯ ಎಸಗಿದ್ದಾರೆ. ಮಹಿಳೆಯ ಹೇಳಿಕೆಯಂತೆ ಆರೋಪಿಗಳ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ಸಂತ್ರಸ್ತೆ ಕರ್ನಾಲ್ ರೈಲ್ವೇ ಸ್ಟೇಷನ್ ನಲ್ಲಿ ರೈಲಿಗಾಗಿ ಕಾಯುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ನನ್ನ ಜೊತೆ ಬಂದು ಊಟ ಶೇರ್ ಮಾಡುವಂತೆ ಕೇಳಿಕೊಳ್ಳುವ ಮೂಲಕ ಮಹಿಳೆಯನ್ನು ಪುಸಲಾಯಿಸಿದ್ದಾನೆ. ಇದಕ್ಕೆ ಒಪ್ಪಿದ ಮಹಿಳೆ ರೈಲ್ವೇ ನಿಲ್ದಾಣದ ಪಕ್ಕದಲ್ಲೇ ಇರುವ ಫ್ಯಾಕ್ಟರಿ ಶೆಡ್ ನಲ್ಲಿ ಊಟಕ್ಕೆಂದು ಆತನೊಂದಿಗೆ ತೆರಳಿದ್ದಾರೆ. ಈ ವೇಳೆ ಅಲ್ಲಿ 7 ಮಂದಿ ಅದಾಗಲೇ ಬಂದು ಕಾಯುತ್ತಿದ್ದರು.

ಮಹಿಳೆ ಅಲ್ಲಿನ ಪರಿಸ್ಥಿತಿಯನ್ನು ಅರಿಯುತ್ತಿದ್ದಂತೆಯೇ ಅಲ್ಲಿದ್ದವರಲ್ಲೊಬ್ಬ ಬಂದು ಆಕೆಯ ಮೇಲೆ ಏಕಾಏಕಿ ದಾಳಿ ಮಾಡಿದ್ದಾನೆ. ಅಲ್ಲದೇ 8 ಮಂದಿಯೂ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಇದನ್ನು ಮಹಿಳೆ ವಿರೋಧಿಸಿದಾಗ ಆಕೆಯ ಮೇಲೆ ಕಾಮುಕರು ಕಬ್ಬಿಣದ ಸರಳಿನಿಂದ ಹೊಡೆದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಬಿದ್ದಿದ್ದಾರೆ. ಈ ವೇಳೆ ಫ್ಯಾಕ್ಟರಿ ಶೇಡ್ ನಿಂದ ಎಲ್ಲರೂ ಪರಾರಿಯಾಗಿದ್ದಾರೆ. ಎಲ್ಲರೂ ಹೋದ ಬಳಿಕ ಹೇಗೋ ಅಲ್ಲೇ ಬಿದ್ದಿದ್ದ ನನ್ನ ಮೊಬೈಲನ್ನು ತೆಗೆದುಕೊಂಡು ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿರುವುದಾಗಿ ಮಹಿಳೆ ತನಿಖಾಧಿಕಾರಿಗಳ ಬಳಿ ಹೇಳಿದ್ದಾರೆ.

ಮಹಿಳೆ ಕರೆ ಮಾಡಿ ಕಾಮುಕರ ಅಟ್ಟಹಾಸದ ವಿಚಾರ ತಿಳಿಸುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ಕೂಡಲೇ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಂಢೀಗಡದಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಅಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

police 1 1

ಮಹಿಳೆಯ ಹೇಳಿಕೆಯನ್ನಾಧರಿಸಿ 8 ಮಂದಿ ಅಪರಿಚಿತ ವ್ಯಕ್ತಿಗಳ ಮೇಲೆ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ ಆರೋಪಿಗಳ ಪತ್ತೆಗಾಗಿ ಘಟನೆ ನಡೆದ ಸುತ್ತಮುತ್ತಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article