ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರರೂ ಆಗಿರುವ ಚೇತನ್ ಅಹಿಂಸಾ (Chetan Kumar) ಒಂದಿಲ್ಲೊಂದು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಇದರಿಂದ ಜಾಲತಾಣದಲ್ಲಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತಾರೆ. ಇದೀಗ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ಪ್ರಮಾಣವಚನ ಸ್ವೀಕರಿದ ವಿಚಾರವನ್ನೂ ಟೀಕಿಸಿದ್ದಾರೆ.
Advertisement
ಶನಿವಾರ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ 8 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಈ ವೇಳೆ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇದನ್ನು ಪ್ರಶ್ನಿಸಿ ನಟ ಚೇತನ್ ಫೇಸ್‌ಬುಕ್ ಪುಟದಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ
Advertisement
Advertisement
‘ವಿಚಾರವಾದಿ’ ಎಂದು ಕರೆಸಿಕೊಳ್ಳುವ ಸಿದ್ದರಾಮಯ್ಯ ಅವರು ಕರ್ನಾಟಕದ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರಾ? ಯಾವ/ಯಾರು ದೇವರು? ದೇವರು ಎಲ್ಲಿದ್ದಾನೆ/ಳೆ/ರೆ? ಇದು ನಿರ್ದಿಷ್ಟವಾದ ಸೈದ್ಧಾಂತಿಕ ಆರಂಭವಲ್ಲ ಎಂದಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ – ಮುಂದಿನ ಕ್ಯಾಬಿನೆಟ್‌ನಲ್ಲಿ ಆದೇಶ
Advertisement
ಸತೀಶ್ ಜಾರಕಿಹೊಳಿ ಅವರನ್ನೂ ಟೀಕಿಸಿದ್ದು, ಶಾಸಕ ಸತೀಶ ಜಾರಕಿಹೊಳಿ ಅವರು ‘ಬುದ್ಧ-ಬಸವ-ಅಂಬೇಡ್ಕರ್’ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಪಕ್ಷವು ತನ್ನ ಸ್ವ-ಲಾಭದಾಯಕ ರಾಜಕೀಯ ಅಧಿಕಾರಕ್ಕಾಗಿ ನಮ್ಮ ಸಮಾನತೆಯ ಐಕಾನ್‌ಗಳನ್ನು ಯಾವಾಗಲೂ ಹೈಜಾಕ್ ಮಾಡಿದೆ. ಎಸ್ಟಿ ನಾಯಕ ಸಮುದಾಯದ ಸತೀಶ್ ಜಾರಕಿಹೊಳಿ ಶೋಷಿತ ಎಸ್ಟಿಗಳಿಗೆ ಒಳಮೀಸಲಾತಿಯನ್ನು ಬೆಂಬಲಿಸುತ್ತಾರೆಯೇ? ಅಥವಾ ಬುದ್ಧ-ಬಸವ-ಅಂಬೇಡ್ಕರ್ ಕೇವಲ ಗಿಮಿಕ್ ಮಾತ್ರವೇ? ಎಂದು ಪ್ರಶ್ನಿಸಿದ್ದಾರೆ.