ಬೆಂಗಳೂರು: ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ (Anti Conversion Act) ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ ಸಿದ್ದರಾಮಯ್ಯ (Siddaramaiah) ಎಂಬ ಚರ್ಚೆ ಶುರುವಾಗಿದೆ.
ಶಿವಾಜಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್‌ಗೆ ಕ್ರೈಸ್ತ ಸಮುದಾಯ ಮನವಿ ಮಾಡಿದ್ದರು. ಆ ವೇಳೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಈ ನಡುವೆ ಶನಿವಾರ ಮೈಸೂರಿನಲ್ಲಿ ಮತಾಂತರ ಅವರವರ ಹಕ್ಕು, ತಪ್ಪಿಸಲು ಆಗಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಮುಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ‘ಮತಾಂತರ ಅವರ ಹಕ್ಕು’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕಿಡಿ – ಜಾತಿಗಣತಿ ಮತಾಂತರ ಕಾಲಂಗೆ ಆಕ್ಷೇಪ
ಈಗಾಗಲೇ ಕಳೆದ ವರ್ಷವೇ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿತ್ತು. ಆದರೆ, ವಿಧಾನಸಭೆಯ ಉಭಯ ಸದನಗಳ ಮತಾಂತರ ನಿಷೇಧ ಕಾಯ್ದೆ ವಾಪಸ್‌ಗೆ ಸರ್ಕಾರ ಬಿಲ್ ಮಂಡಿಸಿರಲಿಲ್ಲ.
 


 
		 
		 
		 
		 
		
 
		 
		 
		 
		