Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ?: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ?: ವಿಜಯೇಂದ್ರ

Bengaluru City

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ?: ವಿಜಯೇಂದ್ರ

Public TV
Last updated: December 13, 2025 8:05 pm
Public TV
Share
2 Min Read
Yathindra Siddaramaiah BY Vijayendra
SHARE

– ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ (BY Vijayendra) ಪ್ರಶ್ನಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ನಡೆಯುತ್ತಿದ್ದು, ಸದ್ಯದಲ್ಲಿ ಈ ಸಮಸ್ಯೆ ಬಗೆಹರಿಯುವುದಿಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ಸಾಧ್ಯವಾದರೆ ಇದನ್ನು ಮುಂದೂಡಿ ಎಂದು ತಿಳಿಸಿದ್ದೆ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ನಾಡಿನ ಕೃಷಿಕರು, ರೈತರ, ಬಡವರ, ನೇಕಾರರ ಸಮಸ್ಯೆ ಸೇರಿ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕೆಂದು ಮುಖ್ಯಮಂತ್ರಿಗಳಿಗೆ ಅಧಿವೇಶನ ಆರಂಭಕ್ಕೂ ಮೊದಲೇ ಗಮನ ಸೆಳೆದಿದ್ದೆ ಎಂದು ಹೇಳಿದರು. ಇದನ್ನೂ ಓದಿ: ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ – ಆಯೋಜಕ ಸತಾದೃ ದತ್ತಾ ಬಂಧಿಸಿದ ಕೋಲ್ಕತ್ತಾ ಪೊಲೀಸರು

yathindra siddaramaiah

 

ಮುಖ್ಯಮಂತ್ರಿ ವಿಷಯದಲ್ಲಿ ಪೈಪೋಟಿ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಹೇಳುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಾಗ ಒಂದು ರೀತಿ ನಿಸ್ಸಹಾಯಕರಾಗಿ ಮಾತನಾಡಿದ್ದಾಗಿ ಗಮನ ಸೆಳೆದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಪಾಕಿಸ್ತಾನ ಪರ ಸ್ಪೈ – ವಾಯುಪಡೆಯ ನಿವೃತ್ತ ಅಧಿಕಾರಿ ಅಸ್ಸಾಂನಲ್ಲಿ ಬಂಧನ

ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು. ಆಡಳಿತ ಪಕ್ಷ ಮತ್ತು ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸುವ ಮತ್ತು ಸಮಸ್ಯೆಗೆ ಸ್ಪಂದಿಸಬೇಕೆಂಬ ವ್ಯವಧಾನವೂ ಇಲ್ಲದೇ ಇರುವುದು ನಿಜವಾಗಲೂ ದುರ್ದೈವ ಎಂದು ಟೀಕಿಸಿದರು. ಇದನ್ನೂ ಓದಿ: ದೆಹಲಿಯತ್ತ ಮುಖ ಮಾಡಿದ ‘ಕೈ’ ನಾಯಕರು – ಸಮಾವೇಶ ನೆಪದಲ್ಲೇ ಹೈಕಮಾಂಡ್ ಭೇಟಿ ಮಾಡ್ತಾರಾ?

ಪರಸ್ಪರ ಕತ್ತಿ ಮಸೆಯುವ ಸಿಎಂ, ಡಿಸಿಎಂ:
ಎರಡು ವರ್ಷಗಳಿಂದ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು, ಒಬ್ಬರಿಗೆ ಒಬ್ಬರು ಕತ್ತಿ ಮಸೆಯುತ್ತಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದ ಮೇಲೆ ಆಗುತ್ತಿದೆ. ಮುಖ್ಯಮಂತ್ರಿಗಳ ವಿಚಾರ ಕಾಂಗ್ರೆಸ್ಸಿನ ಆಂತರಿಕ ವಿಚಾರವಲ್ಲ, ಅವರು ರಾಜ್ಯಕ್ಕೆ ಮುಖ್ಯಮಂತ್ರಿ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಮತಗಳ್ಳತನ ನಡೆದಿರುವುದು ಸತ್ಯ, ಇದರ ವಿರುದ್ಧ ಸೂಕ್ತ ಕ್ರಮ: ಡಿಕೆಶಿ

ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥ ಆಗಿಲ್ಲ:
ರಾಜ್ಯದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಮೆಕ್ಕೆಜೋಳ ಬೆಳೆಗಾರರು ಖರೀದಿ ಕೇಂದ್ರ ಪ್ರಾರಂಭಕ್ಕೆ ಒತ್ತಾಯಿಸುತ್ತಿದ್ದಾರೆ. ಕೇಂದ್ರ ಸರ್ಕಾರ 2,400 ರೂ. ಬೆಂಬಲ ಬೆಲೆ ನಿಗದಿಪಡಿಸಿದರೂ ಸೂಕ್ತ ಸಮಯದಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಿಲ್ಲ. ರೈತರು ಮೆಕ್ಕೆಜೋಳವನ್ನು 1,700- 1,600 ರೂ.ಗೆ ದಲ್ಲಾಳಿಗಳಿಗೆ, ಮಧ್ಯವರ್ತಿಗಳಿಗೆ ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ. ಬೆಳೆ ಪರಿಹಾರವನ್ನು ಘೋಷಿಸಿ 3 ತಿಂಗಳಾದರೂ ಸಮರ್ಪಕವಾಗಿ ಕೊಟ್ಟಿಲ್ಲ. ಭೀಕರ ಮಳೆಯಿಂದ ರಾಜ್ಯದಲ್ಲಿ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿವೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ, ಭ್ರಷ್ಟಾಚಾರ ಮಿತಿ ಮೀರಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.  ಇದನ್ನೂ ಓದಿ: 2ನೇ ಗಂಡನನ್ನು ಬಿಟ್ಟು ಕಾನ್ಸ್‌ಟೇಬಲ್ ಜೊತೆ ಮಹಿಳೆ ಎಸ್ಕೇಪ್ – ಪೇದೆ ಅಮಾನತು

TAGGED:bengaluruBY VijayendracongressDK ShivakumarsiddaramaiahYathindra siddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಬಿವೈ ವಿಜಯೇಂದ್ರಬೆಂಗಳೂರುಯತೀಂದ್ರ ಸಿದ್ದರಾಮಯ್ಯಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Bonded Labour Udupi
Latest

ಉಡುಪಿ| ವ್ಯಕ್ತಿಯನ್ನು 30 ವರ್ಷದಿಂದ ಜೀತಕ್ಕೆ ಇರಿಸಿಕೊಂಡಿದ್ದ ಮಹಿಳೆಯ ಬಂಧನ

Public TV
By Public TV
2 hours ago
congress flag
Bengaluru City

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ – ಅಸ್ಸಾಂನ 10ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಬೆಂಗಳೂರಿಗೆ ಶಿಫ್ಟ್‌

Public TV
By Public TV
3 hours ago
siddaramaiah dk shivakumar
Bengaluru City

ಸೂರ್ಯನಗರದಲ್ಲಿ 813 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಸಂಪುಟ ಒಪ್ಪಿಗೆ

Public TV
By Public TV
3 hours ago
congress mlas meeting
Bengaluru City

ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ನಡುವೆ ಸಚಿವ ಸಂಪುಟ ವಿಸ್ತರಣೆ ಕೂಗು

Public TV
By Public TV
3 hours ago
Chandru Lamani Released From Parappana Agrahara
Bengaluru City

ಜೈಲಿಂದ ಬಿಡುಗಡೆಯಾದ ಚಂದ್ರು ಲಮಾಣಿ – ದೇವಸ್ಥಾನದಲ್ಲಿ ಈಡುಗಾಯಿ ಹೊಡೆದ ಶಾಸಕ

Public TV
By Public TV
4 hours ago
Gadag Lakkundi Excavation
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ತೆರೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?