Connect with us

Bengaluru City

ಅನಧಿಕೃತ ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಭು ಚವ್ಹಾಣ್ ಸೂಚನೆ

Published

on

ಹಾಸನ: ಜಿಲ್ಲೆಯ ಅರಸೀಕೆರೆ ಪ್ರದೇಶದಲ್ಲಿ 4 ರಿಂದ 5 ಕಸಾಯಿಖಾನೆಗಳು ಅನಧಿಕೃತವಾಗಿ ನಡೆಯುತ್ತಿರುವುದರ ವಿರುದ್ಧ ಕ್ರಮ ಕೈಗೊಳ್ಳಲು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅನಧಿಕೃತ ಕಸಾಯಿಖಾನೆಯ ವಿರುದ್ಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಕೆಲದಿನಗಳ ಹಿಂದೆ ಕಸಾಯಿಖಾನೆಯ ಬಗ್ಗೆ ಆರೋಪ ಕೇಳಿ ಬಂದಿದೆ. ಹೀಗಾಗಿ ಇವುಗಳ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಹಾಸನ ಜಿಲ್ಲೆಗೆ ಕೆಲ ದಿನಗಳ ಹಿಂದೆ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಕೆಲ ಗೋಪಾಲಕರು ಈ ವಿಷಯವನ್ನು ಸಚಿವರ ಗಮನಕ್ಕೆ ತಂದಿದ್ದರು. ಇದೀಗ ಸಚಿವರು ಪತ್ರಿಕಾ ಪ್ರಕಟನೆ ಹೊರಡಿಸಿದ್ದು, ಅರಸಿಕೆರೆ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಸಂಗ್ರಹ ಮಾಡಿದ ಸುಮಾರು 1 ಟನ್ ಗೋಮಾಂಸವನ್ನು ಪೊಲೀಸ್ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿರುವುದು ನನ್ನ ಗಮನಕ್ಕೆ ಬಂದಿದೆ. ಅಲ್ಲದೇ ಅನಧಿಕೃತವಾಗಿ ಮೂಳೆಗಳ ಸಂಗ್ರಹಣೆ ಮಾಡಿರುವುದು ತಿಳಿದು ಬಂದಿದೆ. ಯಾವುದೇ ಮುಲಾಜಿಲ್ಲದೆ ತಪ್ಪಿತಸ್ಥರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಗೌಗ್ಯಾನ ಫೌಂಡೇಷನ್ ಸ್ವಯಂ ಸೇವಕರ ಸಹಾಯದಿಂದ ಪೊಲೀಸ್ ಇಲಾಖೆ ಕಾರ್ಯಾಚರಣೆ ನಡೆಸಿ ಗೋಮಾಂಸ ಮತ್ತು ಮೂಳೆಗಳನ್ನು ವಶಪಡಿಸಿಕೊಂಡಿದ್ದರು. ಇದೀಗ ಸಚಿವರಿಂದ ಪಶುಸಂಗೋಪನೆ ಇಲಾಖೆಯ ಆಯುಕ್ತರು ಹಾಗೂ ಉಪನಿರ್ದೇಶಕರುಗಳಿಗೆ ಸೂಚನೆ ನೀಡಲಾಗಿದ್ದು ಪೊಲೀಸ್ ಇಲಾಖೆ ಸಹಾಯದಿಂದ ಎಲ್ಲ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ತಿಳಿಸಲಾಗಿದೆ.

Click to comment

Leave a Reply

Your email address will not be published. Required fields are marked *