ಹಾಸನ: ವರ್ಷಕ್ಕೆ ಒಂದು ಬಾರಿಯಷ್ಟೇ ದರ್ಶನ ಭಾಗ್ಯ ಕರುಣಿಸುತ್ತಿರುವ ಹಾಸನದ ಅಧಿದೇವತೆ ಹಾಸನಾಂಬೆ (Hasanamba Temple) ದೇವಿಯ ಗರ್ಭಗುಡಿ ಬಾಗಿಲು ಓಪನ್ ಆಗಿದೆ.
ಆಶ್ವೀಜ ಮಾಸದ ಮೊದಲ ಗುರುವಾರ (ಇಂದು) ಮಧ್ಯಾಹ್ನ 12.24ಕ್ಕೆ ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಗಿದೆ. ಈ ಬಾರಿಯ ಜಾತ್ರಾ ಮಹೋತ್ಸವ ಇಂದಿನಿಂದ ನವೆಂಬರ್ 15 ರವರೆಗೆ ನಡೆಯಲಿದೆ.
Advertisement
Advertisement
ಗರ್ಭಗುಡಿಯ ಬಾಗಿಲು ತೆರೆದ ಇಂದು ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. 15 ದಿನಗಳಲ್ಲಿ 13 ದಿನಗಳು ಮಾತ್ರ 24*7 ಭಕ್ತರಿಗೆ ತಾಯಿ ಹಾಸನಾಂಬೆ ದರ್ಶನ ಕರುಣಿಸಲಿದ್ದಾಳೆ. ಈ ಬಾರಿ ಜಾತ್ರಾ ಮಹೋತ್ಸವ ವಿಶೇಷತೆಯಿಂದ ಕೂಡಿದ್ದು ಹೆಲಿಟೂರಿಸಂ, ಪ್ಯಾರಾ ಸೈಲಿಂಗ್, ಪ್ಯಾರಾ ಮೋಟಾರ್, ಚಾಪರ್‍ನಲ್ಲಿ ಹಾರಾಟ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.
Advertisement
Advertisement
ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬೆ ದೇವಿ ಹಲವು ಪವಾಡ ಸದೃಶ ಸಂಗತಿಗಳನ್ನು ಮೈಗೂಡಿಸಿಕೊಂಡಿದ್ದಾಳೆ. ಪ್ರತಿವರ್ಷ ಗರ್ಭಗುಡಿ ಬಾಗಿಲು ಹಾಕುವ ಸಂದರ್ಭದಲ್ಲಿ ಹಚ್ಚಿದ ಹಣತೆ, ಇಟ್ಟ ನೈವೇದ್ಯ ಹಾಗೂ ಮುಡಿಸಿದ ಹೂ ಬಾಡುವುದಿಲ್ಲ ಎಂಬ ನಂಬಿಕೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಜೊತೆಗೆ ಅಧಿದೇವತೆ ಬೇಡಿಕೊಂಡು ಇಷ್ಟಾರ್ಥಗಳನ್ನು ಈಡೇರಿಸುತ್ತಾರೆ ಎಂಬ ಅಚಲ ವಿಶ್ವಾಸ ಇರುವುದರಿಂದ ಜಿಲ್ಲೆ, ರಾಜ್ಯ ಮಾತ್ರವಲ್ಲದೆ ಅನೇಕ ಕಡೆಗಳಿಂದ ಲಕ್ಷಾಂತರ ಭಕ್ತರಿದ್ದಾರೆ.
ಈ ಬಾರಿ ಒಟ್ಟು ಹದಿನೈದು ದಿನಗಳಲ್ಲಿ 13 ದಿನ ಮಾತ್ರ ಸಾರ್ವಜನಿಕ ದರ್ಶನ ಹಾಗೂ ಶಕ್ತಿ ಯೋಜನೆ ಜಾರಿ ಇರುವುದರಿಂದ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಮಳೆ ಬಂದರೆ ಭಕ್ತರು ನೆನೆಯದಂತೆ ಜರ್ಮನ್ ಟೆಂಟ್, ಫ್ಯಾನ್, ಎಸಿ ಸೇರಿ ಬರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಈ ಬಾರಿ ದೇವಾಲಯಕ್ಕೆ ಬರುವ ಎಲ್ಲಾ ಭಕ್ತರಿಗೆ ಮೂರು ಹೊತ್ತು ಕೂಡ ಪ್ರಸಾದ ವಿತರಣೆ ವ್ಯವಸ್ಥೆ ಕಲ್ಪಿಸಿದೆ.
Web Stories