ಹಾಸನ: ಹಾಸನಾಂಬೆ (Hasanamba) ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ (Public Viewing) ಐದನೇ ದಿನವಾದ ಇಂದು (ಮಂಗಳವಾರ) ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ.
ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇವರಿಗೆ ಹಲವು ಸಚಿವರು ಹಾಗೂ ಶಾಸಕರು ಸಾಥ್ ನೀಡಲಿದ್ದಾರೆ. ನ.2ರಂದು ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆದಿದ್ದು, ನ.3ರಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಾರ್ವಜನಿಕ ದರ್ಶನದ ಐದನೇ ದಿನವಾಗಿದ್ದು, ಮಂಗಳವಾರ ಶಕ್ತಿ ದೇವತೆಯ ದರ್ಶನ ಪಡೆಯಲು ಸಿಎಂ ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಇಂದು, ನಾಳೆ ಅಬ್ಬರಿಸಲಿದೆ ಹಿಂಗಾರು ಮಳೆ – ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Advertisement
Advertisement
ಇಂದು ಮಧ್ಯಾಹ್ನ 12 ಗಂಟೆಗೆ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಸಿದ್ದರಾಮಯ್ಯ ಆಗಮಿಸಿ 12:30ಕ್ಕೆ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಹಾಸನಾಂಬೆ ದರ್ಶನದ ಬಳಿಕ ಎಸ್.ಎಂ.ಕೃಷ್ಣನಗರದಲ್ಲಿ ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹಾಸನದ ಜಿ.ಪಂ. ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಸಿಎಂ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿಪೊಲೀಸ್ ಭದ್ರತೆ ಇದ್ದು, ಹಾಸನಾಂಬೆ ದೇಗುಲದ ಆವರಣದಲ್ಲೂ ಖಾಕಿ ಸರ್ಪಗಾವಲಿದೆ. ಇದನ್ನೂ ಓದಿ: ಕೆಇಎ ಪರೀಕ್ಷೆ ಅಕ್ರಮ ಪ್ರಕರಣ – ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಕಾಂಪೌಂಡ್ ಹಾರಿ ಎಸ್ಕೇಪ್
Advertisement