ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ – 5.8 ಕೋಟಿ ರೂ. ಹಣ ಸಂಗ್ರಹ

Public TV
1 Min Read
Hasanamba

ಹಾಸನ: ಹಾಸನಾಂಬೆ ದೇವಿ (Hasanamba) ಜಾತ್ರಾ ಮಹೋತ್ಸವದಲ್ಲೇ ಈ ಬಾರೀ ಅತೀ ಹೆಚ್ಚು ಆದಾಯ ಸಂಗ್ರಹವಾಗಿದೆ. ಅಲ್ಲದೇ ಅತೀ ಹೆಚ್ಚು ಭಕ್ತರು ಸಹ ಈ ಸಲ ದೇವಿಯ ದರ್ಶನ ಪಡೆದಿದ್ದಾರೆ.

ಈ ತಿಂಗಳ 2ರಿಂದ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಇದೇ ಮೊದಲ ಬಾರಿಗೆ 5.8 ಕೋಟಿ ರೂ. ಆದಾಯ ಹರಿದು ಬಂದಿದೆ. ವಿಶೇಷ ದರ್ಶನದ 1,000 ರೂ. ಟಿಕೆಟ್‍ನಿಂದ 2.59 ಕೋಟಿ ರೂ., 300 ರೂ. ಟಿಕೆಟ್‍ನಿಂದ 2 ಕೋಟಿ ರೂ. ಹಣ ಸಂಗ್ರಹವಾಗಿದೆ. ಅಲ್ಲದೇ ವಿಶೇಷ ದರ್ಶನದ ಟಿಕೆಟ್ ಹಾಗೂ ಲಾಡು ಪ್ರಸಾದ ಮಾರಾಟದಿಂದ ಒಟ್ಟಾರೆಯಾಗಿ 5.8 ಕೋಟಿ ರೂ. ಹಣ ಸಂಗ್ರಹವಾಗಿದೆ. ಇದರೊಂದಿಗೆ ಇದೇ ಮೊದಲ ಬಾರಿಗೆ ಹತ್ತು ಲಕ್ಷಕ್ಕೂ ಹೆಚ್ಚಿನ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಕಳೆದ ವರ್ಷ 3.61 ಕೋಟಿ ರೂ. ಹಣ ಸಂಗ್ರಹವಾಗಿತ್ತು. ಇದನ್ನೂ ಓದಿ: ಗುಂಡ್ಲುಪೇಟೆಯ 7 ಗ್ರಾಮಗಳಿಗಿಲ್ಲ ದೀಪಾವಳಿಯ ಸಂಭ್ರಮ

ಹಾಸನಾಂಬೆ ದೇವಿಯ ದೇಗುಲ  (Hasanamba Temple) ಇಂದು (ಸೋಮವಾರ) ಮತ್ತು ನಾಳೆ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶವಿದೆ. ಬುಧವಾರ 12 ಗಂಟೆಯ ನಂತರ ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತದೆ. ಈ ನಿಟ್ಟಿನಲ್ಲಿ ಇಂದು ಸಹ ದೇವಿ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ದೇಗುಲಕ್ಕೆ ದಾಖಲೆಯ ಆದಾಯ- 9 ದಿನಗಳಲ್ಲಿ 4,56,22,580 ರೂ. ಸಂಗ್ರಹ

Share This Article