ಹಾಸನ: ಜಿಲ್ಲೆಯ ಅರಸೀಕೆರೆ (Arsikere) ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿನ ಟ್ಯಾಂಕರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Advertisement
ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಜನರ ದಾರುಣವಾಗಿ ಸಾವನ್ನಪ್ಪಿದ್ದರು. ಒನ್ ವೇನಲ್ಲಿ ಬಂದು ಅಪಘಾತಕ್ಕೆ ಕಾರಣವಾಗಿದ್ದ ಹಾಲಿನ ಟ್ಯಾಂಕರ್ ಚಾಲಕ ನವೀನ್, ಅಪಘಾತ ನಂತರ ವಾಹನ ಬಿಟ್ಟು ಪರಾರಿಯಾಗಿದ್ದನು. ಇದೀಗ ನವೀನ್‍ನನ್ನು ಬಾಣಾವರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ, ಹಾಸನಾಂಬೆ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ಅಪಘಾತ – ಮಕ್ಕಳು ಸೇರಿ 9 ಮಂದಿ ದುರ್ಮರಣ
Advertisement
Advertisement
ಅರಸೀಕೆರೆ ತಾಲೂಕಿನ, ಹಳ್ಳಿಕೆರೆ ಗ್ರಾಮದ ಹದಿನಾಲ್ಕು ಮಂದಿ ಟೆಂಪೋ ಟ್ರಾವೆಲರ್ ವಾಹನದಲ್ಲಿ ನಿನ್ನೆ ಧರ್ಮಸ್ಥಳಕ್ಕೆ ತೆರಳಿದ್ದರು. ಮಕ್ಕಳು ಸೇರಿದಂತೆ ಪುರುಷರು ಮುಡಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿ, ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ದೇವಿ ದರ್ಶನ ಪಡೆದು ಎಲ್ಲರೂ ಹಳ್ಳಿಕೆರೆ ಗ್ರಾಮಕ್ಕೆ ತೆರಳುತ್ತಿದ್ದರು. ಸ್ವಗ್ರಾಮ ತಲುಪಲು ಎರಡು ಕಿಲೋಮೀಟರ್ ಇತ್ತು. ಐದು ನಿಮಿಷದಲ್ಲಿ ಮನೆ ಸೇರಿಕೊಳ್ಳುತ್ತಿದ್ದರು. ಅಷ್ಟೊತ್ತಿಗಾಗಲೇ ಅಪಘಾತ ಸಂಭವಿಸಿ ಈ ದುರಂತ ನಡೆದಿದೆ. ಇದನ್ನೂ ಓದಿ: ಈ ಮನೆ ಅದಕ್ಕಲ್ಲ, ಮಿತಿ ಮೀರಿದ ರೂಪೇಶ್- ಸಾನ್ಯ ರೊಮ್ಯಾನ್ಸ್‌ಗೆ ಕಿಚ್ಚ ವಾರ್ನಿಂಗ್