ಹಾಸನ: ಕಾಲೇಜು ವಿದ್ಯಾರ್ಥಿ (Student) ಮೇಲೆ ಗಾಂಜಾ ಮತ್ತಲ್ಲಿದ್ದ ಅಪ್ರಾಪ್ತರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಆಲೂರು (Aluru) ತಾಲೂಕಿನ, ಭೈರಾಪುರ ಗ್ರಾಮದಲ್ಲಿ ನಡೆದಿದೆ. ಇದೀಗ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತರ ಗ್ಯಾಂಗ್ ಕಾಲೇಜಿನಿಂದ ಮನೆಗೆ ತೆರಳುವಾಗ ಮೂವರು ಅಪ್ರಾಪ್ತ ಪುಂಡರು ವಿದ್ಯಾರ್ಥಿಯನ್ನು ಅಡ್ಡಗಟ್ಟಿ ಬೈಕ್‌ನಲ್ಲಿ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡುವ ವಿಡಿಯೋವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಟ್ಟುಕೊಂಡು ವಿಷಯ ಯಾರಿಗಾದರೂ ಹೇಳಿದರೆ ವೈರಲ್ ಮಾಡುವುದಾಗಿ ಅಪ್ರಾಪ್ತರು ಬೆದರಿಕೆ ಹಾಕಿದ್ದರು. ಅಲ್ಲದೇ ಹಲ್ಲೆ ಮಾಡಿರುವ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಪುಣೆಯ 6,000 ಕೋಟಿ ಮೌಲ್ಯದ ಡ್ರಗ್ಸ್ ಮಾಫಿಯಾ ಕೇಸ್ – ಪ್ರಕರಣದ ಕಿಂಗ್‌ಪಿನ್ ವಿರೇಂದ್ರ ಬೈಸೋಯಾ ಅರೆಸ್ಟ್
ಆ.13 ರ ಸಂಜೆ ವಿಡಿಯೋ ವೈರಲ್ ಮಾಡಿದ್ದರು. ನಂತರ ಹಲ್ಲೆಗೊಳಗಾದ ವಿದ್ಯಾರ್ಥಿ ಪೋಷಕರ ಬಳಿ ಘಟನೆ ಬಗ್ಗೆ ತಿಳಿಸಿದ್ದಾನೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ದೂರು ದಾಖಲಿಸಿಕೊಳ್ಳುತ್ತಿಲ್ಲ ಎಂದು ಬಾಲಕನ ತಂದೆ ಆರೋಪಿಸಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಹಿಪ್ಪರಗಿ ಕಾರು ಸ್ಫೋಟ ಪ್ರಕರಣ| ಬಯಲಾಯ್ತು ಕೊಲೆಯ ಮಹಾಸಂಚು; ನಾಲ್ವರು ಆರೋಪಿಗಳ ಬಂಧನ

