Connect with us

Districts

ಶಾಸಕ ಬಾಲಕೃಷ್ಣ ಆರೋಗ್ಯಕ್ಕಾಗಿ ದೇವರ ಮೊರೆ ಹೋದ ಅಭಿಮಾನಿಗಳು

Published

on

ಹಾಸನ: ಶ್ರವಣಬೆಳಗೂಳ ಕ್ಷೇತ್ರದ ಶಾಸಕ ಬಾಲಕೃಷ್ಣ ಅನಾರೋಗ್ಯಕ್ಕೀಡಾಗಿದ್ದು, ಅವರ ಆರೋಗ್ಯ ವೃದ್ಧಿಗಾಗಿ ಶ್ರವಣಬೆಳಗೊಳದ ಬನ್ನಿಮರದ ಆಂಜನೇಯ ಸ್ವಾಮಿಯವರ ಸನ್ನಿಧಿಯಲ್ಲಿ ಅಭಿಮಾನಿಗಳು, ಬೆಂಬಲಿಗರು ಪೂಜೆ ಸಲ್ಲಿಸಿದ್ದಾರೆ.

ಕಳೆದ 8 ದಿನದ ಹಿಂದೆ ವಿಪರೀತ ಕೆಮ್ಮಿನಿಂದ ಶಾಸಕ ಬಾಲಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರೋಗ್ಯ ಚೇತರಿಕೆ ಆಗಲೆಂದು ಶ್ರವಣಬೆಳಗೊಳ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜೆಡಿಎಸ್ ಕಾರ್ಯಕರ್ತರು ಶಾಸಕರ ಹೆಸರಿನಲ್ಲಿ ಪೂಜೆ ಮಾಡಿಸಿದರು. ಶಾಸಕರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ತಾಲೂಕು ಜೆಡಿಎಸ್ ಅಧ್ಯಕ್ಷರಾದ ಪರಮ ದೇವರಾಜೇಗೌಡರು, ಹೊಸಹಳ್ಳಿ ರಾಮೇಗೌಡರು, ಪರಮ ಕೃಷ್ಣೇಗೌಡರು, ಸಿ. ಎನ್ ಬಾಲಕೃಷ್ಣ ಬ್ರಿಗೇಡ್ ಅಧ್ಯಕ್ಷರು ರೀತೇಶ್ ಸಾಗರ ಜೆಡಿಎಸ್ ಮುಖಂಡರು ಮತ್ತು ಜೆಡಿಎಸ್ ಕಾರ್ಯಕರ್ತರು ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಹಿಂದೆ ಟ್ವೀಟ್ ಮಾಡಿದ್ದ ಬಾಲಣ್ಣ, ನಾನು ಅನಾರೋಗ್ಯಕ್ಕೆ ತುತ್ತಾದ ಕಾರಣ ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕ್ಷೇತ್ರದ ಜನರಿಗೆ ಯಾವುದೇ ರೀತಿಯ ತೊಂದರೆಯಾದರೆ ಅದಕ್ಕೆ ಸ್ಪಂದಿಸಲು ಅಧಿಕಾರಿಗಳಿಗೆ ಮತ್ತು ನನ್ನ ಆಪ್ತ ಸಹಾಯಕರಿಗೆ ಸೂಚಿಸಿದ್ದೇನೆ. ಈ ವರ್ಷ ದೀಪಾವಳಿ ಹಬ್ಬವನ್ನು ಕೂಡ ನಿಮ್ಮ ಜೊತೆ ಆಚರಣೆ ಮಾಡಲು ಆಗುತ್ತಿಲ್ಲ. ಈ ವಿಚಾರಕ್ಕೆ ಬೇಸರವಿದೆ ಎಂದಿದ್ದರು.

Click to comment

Leave a Reply

Your email address will not be published. Required fields are marked *