ಹಾಸನ: ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ಎ1 ಆರೋಪಿಯಾದರು ಬಂಧಿಸಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಆರೋಪ ಮಾಡಿದ್ದಾರೆ.
ಮಂಗಳವಾರ ರಾತ್ರಿ ಉಪಚುನಾವಣೆಗೆ ಹಣ ಹಂಚಲು ಬಂದಿದ್ದಾರೆ ಎಂದು ಹಾಸನದ ಚನ್ನರಾಯಪಟ್ಟಣ ತಾ. ಕೆ.ಆರ್ ಪೇಟೆ ಗಡಿಭಾಗದ ನಂಬಿಹಳ್ಳಿ ಗ್ರಾಮದಲ್ಲಿ ಸೂರಜ್ ರೇವಣ್ಣ ಮತ್ತು ಅವರ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು.
Advertisement
ಈ ವಿಚಾರವಾಗಿ ಸೂರಜ್ ರೇವಣ್ಣ ಸೇರಿದಂತೆ ಏಳು ಜನರ ಮೇಲೆ ಬಿಜೆಪಿ ಕಾರ್ಯಕರ್ತರು ಚನ್ನರಾಯಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‍ಐಆರ್ ದಾಖಲಾಗಿದೆ. ಆದರೆ ದೂರು ನೀಡಿ 24 ಗಂಟೆ ಕಳೆದರೂ ಎ1 ಆರೋಪಿ ಬಂಧನವಾಗಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
Advertisement
Advertisement
ಈ ಹಲ್ಲೆಗೆ ಸಂಬಂಧಿಸಿದ ವಿಡಿಯೋ ಈಗ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ನಾನು ಕಳೆದ 20-30 ವರ್ಷಗಳಿಂದ ಜೆಡಿಎಸ್ ಕಾರ್ಯಕರ್ತನಾಗಿ ದುಡಿದ್ದೇನೆ. ಈಗ ಅವರು ಮಾತು ಕೇಳಲಿಲ್ಲ ಎಂದು ನನ್ನ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ. ಇವರು ಜನಪ್ರತಿನಿಧಿಗಳ ಅಥವಾ ರೌಡಿಗಳಾ..?. ನಮ್ಮ ಮೇಲೆ ಹಲ್ಲೆ ಮಾಡಿ ರೌಡಿಸಂ ನಡೆಸುತ್ತಿದ್ದಾರೆ. ಪ್ರಾಣ ತೆಗೆಯುವುದಾದರೆ ಎದುರಿಗೆ ಬಂದು ಪ್ರಾಣ ತೆಗೆಯಬೇಕೆಂದು ಎಂದು ವಿಡಿಯೋದಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಏನಿದು ಘಟನೆ?
ಮಂಗಳವಾರ ಬೆಂಗಳೂರಿನ ವಿಜಯನಗರ ಮೂಲದ ರವೀಂದ್ರ ಎಂಬವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದ ಸ್ನೇಹಿತನ ಮನೆಗೆ ತನ್ನ ಸಹಪಾಠಿಗಳೊಂದಿಗೆ ಬಂದಿದ್ದರು. ರವೀಂದ್ರ ಬಂದಿರುವ ವಿಚಾರವನ್ನ ಜೆಡಿಎಸ್ ಕಾರ್ಯಕರ್ತರು ಸೂರಜ್ ರೇವಣ್ಣನವರಿಗೆ ದೂರವಾಣಿ ಮುಖಾಂತರ ತಿಳಿಸಿದ್ದು, ರವೀಂದ್ರ ಕೆಆರ್ ಪೇಟೆಯ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಪರವಾಗಿ ಹಣ ಹಂಚಲು ಬಂದಿದ್ದಾರೆಂಬ ಅನುಮಾನದ ಮೇಲೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿಯ ಕೆಲವು ಕಾರ್ಯಕರ್ತರಿಗೆ ಮತ್ತು ಹೊರಬಂದಿದ್ದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದ್ದರು.
ಹಲ್ಲೆಗೊಳಗಾದ ಮತ್ತು ಗಂಭೀರವಾಗಿ ಗಾಯಗೊಂಡ ಮಾಜಿ ಬಿಬಿಎಂಪಿ ಕಾರ್ಪೊರೇಟರ್ ಸಹಪಾಠಿಗಳಾದ ಆನಂದ್ ಮತ್ತು ಸಂತೋಷ್ ಅವರನ್ನು ಬೆಂಗಳೂರಿನ ಕೊಲಂಬಿಯಾ ಏಪ್ಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿಕೊಡಲಾಗಿದೆ. ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಿವಾಸ್ ಸೆಪಟ್ ಖುದ್ದು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಸಫಲತೆ ಕಂಡಿದ್ದರೂ, ಕೈಮೀರಿ ಹೋಗಿದ್ದರಿಂದ ಡಿಎಆರ್ ತುಕಡಿಯನ್ನು ನಿಯೋಜಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿದ್ದ ಮಾಜಿ ಸಚಿವ ಹೆಚ್ ಡಿ ರೇವಣ್ಣ ಪುತ್ರ ಸೂರಜ್ ರೇವಣ್ಣನೇ ಕಾರಣ ಎಂಬುದು ಬಿಜೆಪಿ ಕಾರ್ಯಕರ್ತರ ಆರೋಪವಾಗಿದೆ. ಪರಿಸ್ಥಿತಿ ನಿಯಂತ್ರಣಗೊಳ್ಳುವ ತನಕ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿರೋ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.