ಹಾಸನ: ಮಳೆ ಬಂದರು ನಾವೇ ಮಳೆ ಬರುವಂತೆ ಮಾಡಿದ್ದು ಎಂದು ಹೇಳುತ್ತಾರೆ. ಕ್ಷೇತ್ರದಲ್ಲಿ ರಸ್ತೆ ಕೆಲಸ ಮಾಡಿಸಿದರು ನಮ್ಮದೇ ಎಂದು ಹೇಳುತ್ತಾರೆ. ಕಳೆದ ನಾಲ್ಕು ವರ್ಷಗಳಿಂದ ಹಾಸನ ಲೋಕಸಭಾ ಪ್ರತಿನಿಧಿಯಾಗಿ ಆಯ್ಕೆ ಮಾಡಿ ಶಕ್ತಿ ಕೊಟ್ಟಿದ್ದು, ಆದರೆ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಸಮಸ್ಯೆ ಪರಿಹರಿಸಲು ಮಾತ್ರ ವಿಫಲರಾಗಿದ್ದಾರೆ ಎಂದು ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂಗೌಡ ಮಾಜಿ ಪ್ರಧಾನಿಗಳ ಹೆಸರು ಹೇಳದೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಆನೆ ದಾಳಿ ನಿಯಂತ್ರಣ ಹಾಗೂ ಪರಿಹಾರ ಕೋರಿ ಸಕಲೇಶಪುರದ ಬಾಳ್ಳುಪೇಟೆಯಲ್ಲಿ ನಡೆಯುತ್ತಿರುವ ರೈತರ ಹೋರಾಟ 5ನೇ ದಿನಕ್ಕೆ ಕಾಲಿಟ್ಟಿದ್ದು, ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡ ಇಂದು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಳೆದ ನಾಲ್ಕು ದಶಕದಿಂದ ಹಾಸನ ಲೋಕಸಭಾ ಪ್ರತಿನಿಧಿಯಾಗಿದ್ದು, ದೇವರ ಆಶೀರ್ವಾದದಿಂದ ಅವರು ಪಧಾನಿಯೂ ಆಗಿದ್ದಾರೆ. ಆದರೆ ಕ್ಷೇತ್ರದ ಸಂಸದರು ಮಾತ್ರ ಕಾಡಾನೆ ಹಾವಳಿ ಬಗೆಹರಿಸುವಲ್ಲಿ ವಿಫಲವಾಗಿದ್ದಾರೆ. ಈ ಹೋರಾಟ ಕಳೆದ 3 ವರ್ಷಗಳಿಂದ ನಡೆಯುತ್ತಿದ್ದು, ಈ ಸಮಸ್ಯೆ ಬಗೆಹರಿಸಲು ಬೇಕಿರುವುದು ಇಚ್ಛಾಶಕ್ತಿ ಎಂದು ಹೇಳಿದ್ದಾರೆ.
Advertisement
Advertisement
ಆನೆ ಹಾವಳಿಯಲ್ಲಿ ರಾಜಕೀಯ ಮಾಡಲ್ಲ ಎನ್ನುತ್ತಲೇ ಎದುರಾಳಿಗಳ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಪ್ರೀತಂಗೌಡ, ಹಾಸನ ಸಂಸದರೂ ಕಾಡಾನೆ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದ್ದಾರೆ. ಹೆದ್ದಾರಿಗೆ ನಿತಿನ್ ಗಡ್ಕರಿ ಭೇಟಿ ಮಾಡಿದಂತೆ ಕೇಂದ್ರ ಅರಣ್ಯ ಸಚಿವರನ್ನ ಭೇಟಿ ಮಾಡಿ ಸಮಸ್ಯೆ ಪರಿಹರಿಸಬಹುದಿತ್ತು. ಅವರದ್ದೇ ಶಾಸಕರೂ, ಸಚಿವರು, ಸಂಸದರು ಹಾಗೂ ಸಿಎಂ ಆಗಿದ್ದರು ಏನು ಮಾಡುತ್ತಾರೋ ಮಾಡಲಿ. ಆನೆ ಹಾವಳಿ ಎಂದಾಕ್ಷಣ ಕೇಂದ್ರ ಸರ್ಕಾರದ ಕಡೆ ಕೈ ತೋರಿಸುತ್ತಾರೆ. ಈ ರೀತಿ ಬುದ್ಧಿವಂತಿಕೆ ಮಾತುಗಳನ್ನ ಬಿಟ್ಟು ಕ್ಷೇತ್ರದ ಕಡೆ ಗಮನಹರಿಸಿ ಎಂದು ವ್ಯಂಗ್ಯ ಮಾಡಿದರು. ಇದನ್ನು ಓದಿ : 4 ದಿನದಿಂದ ಪ್ರತಿಭಟನೆ ನಡೆಸಿದ್ರು ಕೇರ್ ಮಾಡ್ತಿಲ್ಲ : ಸಿಎಂಗೆ ಹಾಸನ ಮಹಿಳೆ ಅವಾಜ್
Advertisement
ರೈತರ ಸಮಸ್ಯೆ ಬಗೆ ಹರಿದರೆ ನಾವೇ ಬೇಕಿದ್ದರೆ ಗಂಧದ ಹಾರ ಹಾಕಿ, ಜೇನು ತುಪ್ಪದ ಅಭಿಷೇಕ ಮಾಡಿ ದೆಹಲಿವರೆಗೂ ಕರೆದುಕೊಂಡು ಹೋಗುತ್ತೇವೆ. ಹೆಸರಿಗೆ ಮಾತ್ರ ರೈತರ ಮಗ, ಮೊದಲು ರೈತರ ಹೆಸರಿನಲ್ಲಿ ಪ್ರಮಾಣ ಮಾಡುವುದನ್ನ ಬಿಡಿ. ನಿಜವಾದ ರೈತರ ಸಮಸ್ಯೆ, ನಿಮ್ಮನ್ನ ಆಯ್ಕೆ ಮಾಡಿದವರ ಸಮಸ್ಯೆ ಬಗೆಹರಿಸಿ ಎಂದು ಒತ್ತಾಯ ಮಾಡಿದರು.
Advertisement
ಕಾಡಾನೆ ಹಾವಳಿ ನಿಯಂತ್ರಣಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಕೈಯಲ್ಲಿ ವಿಷದ ಬಾಟಲ್ ಹಿಡಿದ ರೈತರು ನಾಳೆ ಬೆಂಗಳೂರಿನಲ್ಲಿ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸೂಕ್ತ ತೀರ್ಮಾನಕ್ಕೆ ಬರುವಂತೆ ಒತ್ತಾಯ ಮಾಡಿದ್ದಾರೆ. ಸಮಸ್ಯೆ ಬಗೆಹರಿಸಲು ವಿಫಲವಾದರೆ ಸಾಮೂಹಿಕವಾಗಿ ವಿಷ ಸೇವನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv