ಹಾಸನ: ವಿಕಲಚೇತನರ ಸಮಸ್ಯೆಗಳನ್ನು ಯಾವುದೇ ರಾಜಕೀಯ ನಾಯಕರೂ ಕೇಳುತ್ತಿಲ್ಲ. ಆದರಿಂದ ನಮಗಾಗಿ ಕೆಲಸ ಮಾಡದವರಿಗೆ ನಾವು ಯಾಕೆ ಮತ ಹಾಕಬೇಕು ಎಂದು ಪ್ರಶ್ನಿಸಿ ಜಿಲ್ಲೆಯ ಅಂಗವಿಕಲರ ಸಂಘದ ಮತದಾನ ಬಹಿಷ್ಕರಿಸಲು ಮುಂದಾಗಿದ್ದಾರೆ.
ಯಾವುದೇ ಪಕ್ಷವಾಗಲಿ, ನಾಯಕರಾಗಲಿ ಅಂಗವಿಕಲರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಕಳೆದ 25 ವರ್ಷಗಳಿಂದ ಜಿಲ್ಲೆಯ ಅಂಗವಿಕಲ ಕ್ಷೇಮಾಭಿವೃದ್ದಿಗೆ ಸಂಘವನ್ನು ಸ್ಥಾಪಿಸಿಕೊಂಡಿದ್ದೇವೆ. ಇದೂವರೆಗೆ 79 ಬಾರಿ ರಾಜ್ಯದ ಮುಖ್ಯಮಂತ್ರಿಗಳೂ ಸೇರಿದಂತೆ ಸಂಬಂಧಿಸಿದ ಎಲ್ಲರಿಗೂ ಮನವಿಗಳನ್ನು ಕೊಟ್ಟಿದ್ದೇವೆ. ಆದ್ರೆ ಯಾರೊಬ್ಬರೂ ಕೂಡ ನಮ್ಮ ಮನವಿಗೆ ಓಗೊಡುತ್ತಿಲ್ಲ. ವಿಕಲಚೇತನರ ಸಮಸ್ಯೆಗಳು ಹಲವಾರು ಇವೆ, ಅವುಗಳನ್ನು ಪರಿಹರಿಸಿಲ್ಲ. ಹೀಗಿರುವಾಗ ಯಾವ ಖುಷಿಗೆ ನಾವು ಮತ ಹಾಕಬೇಕು ಎಂದು ಅಂಗವಿಕಲ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.
Advertisement
Advertisement
ಜಿಲ್ಲೆಯಲ್ಲಿ 1300 ಮಂದಿ ದೈಹಿಕ ವಿಕಲಚೇತನರಿದ್ದೇವೆ. ಜೊತೆಗೆ ವಿವಿಧ ವಿಕಲಾಂಗತೆಯಿಂದ ಬಳಲುತ್ತಿರುವ ವಿಕಲಚೇತನರು ಜಿಲ್ಲೆಯಲ್ಲಿ 25 ಸಾವಿರಕ್ಕು ಹೆಚ್ಚು ಮಂದಿ ಇದ್ದಾರೆ. ಎಲ್ಲಾ ಸಭೆ ಸಮಾರಂಭಗಳಲ್ಲಿ ರಾಜಕೀಯ ನಾಯಕರು ನಮ್ಮ ಬಗ್ಗೆ ಮಾತನಾಡುತ್ತಾರೆ. ಆದ್ರೆ ನಮ್ಮ ನಿರ್ಧಿಷ್ಟ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕರು ಯಾರೂ ಇಲ್ಲ. ಆದ್ದರಿಂದ ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು ಭಾಗವಹಿಸುವುದಿಲ್ಲ. ನಮ್ಮ ಸಂಘದ ವತಿಯಿಂದ ಚುನಾವಣೆ ಬಹಿಷ್ಕಾರ ಮಾಡುವ ಕರೆ ನೀಡುತ್ತೇವೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.