ಹಾಸನ: 2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಝೊಮ್ಯಾಟೋ ಫುಡ್ ಡೆಲಿವರಿ ಬಾಯ್ (Food Delivery Boy) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ (Hassan) ಹೊರವಲಯದ ಬೂವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಮುತ್ತತ್ತಿ ಗ್ರಾಮದ ಎಸ್.ಬಿ.ಎಂ. ಲೇಔಟ್‌ನ ನಿವಾಸಿ ಶರತ್(40) ಮೃತ ದುರ್ದೈವಿ. ಇದನ್ನೂ ಓದಿ: ಚಿತ್ರದುರ್ಗ | ಬೆಲೆ ಕುಸಿತ – ಕಟಾವು ಮಾಡದೇ ಹೊಲದಲ್ಲೇ ಟೊಮೆಟೊ ಬಿಟ್ಟ ರೈತರು
ಶರತ್ ಭಾನುವಾರ ರಾತ್ರಿ 11 ಗಂಟೆಯಲ್ಲಿ ಫುಡ್ ಡೆಲಿವರಿ ಮಾಡಲು ಹಾಸನ ನಗರದಿಂದ ಗೆಂಡೆಗಟ್ಟೆಗೆ ತೆರಳುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಗೆ ತಿರುವು ತೆಗೆದುಕೊಳ್ಳುತ್ತಿದ್ದಾಗ ಬೆಂಗಳೂರು ಕಡೆಯಿಂದ ಬಂದ ಮತ್ತೊಂದು ಬೈಕ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಶರತ್ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪತಿಗೆ ಉಗ್ರರ ಸಂಪರ್ಕ ಇದೆ, ನನ್ನ ಮೇಲೆ ವಿಷಪ್ರಾಶನ ಮಾಡಲಾಗಿದೆ: ಓಂ ಪ್ರಕಾಶ್ ಪತ್ನಿ
ಶರತ್ ಹೆಲ್ಮೆಟ್ ಧರಿಸದ ಕಾರಣ ತಲೆಗೆ ಬಲವಾದ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವವಾಗಿ ಶರತ್ ಸ್ಥಳದಲ್ಲೇ ಮೃತಪಟ್ಟದ್ದಾರೆ. ಮತ್ತೊಬ್ಬ ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ. ಇದನ್ನೂ ಓದಿ: ಚಿನ್ನದ ಬೆಲೆ ಗಗನಕ್ಕೆ – ಮಾರುಕಟ್ಟೆ ಏರಿಳಿತದ ನಡುವೆಯೂ ನೆಚ್ಚಿನ ಹೂಡಿಕೆಯಾಗಲು ಕಾರಣವೇನು?
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.