ಸರ್ಕಾರದಿಂದ ಬಿಡುಗಡೆ ಆಗದ ಹಣ – ಇಂದಿರಾ ಕ್ಯಾಂಟೀನ್‍ಗೆ ಬೀಗ

Advertisements

ಹಾಸನ: ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಹದಿನೈದು ದಿನಗಳಿಂದ ಇಂದಿರಾ ಕ್ಯಾಂಟೀನ್ ಬಂದ್ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ.

Advertisements

ಬಡ ವರ್ಗದವರಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಲೆಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಪಟ್ಟಣ ಪ್ರದೇಶಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆದಿದ್ದರು. ಕಡಿಮೆ ಬೆಲೆಯಲ್ಲಿ ತಿಂಡಿ, ಊಟ ದೊರೆಯುತ್ತಿತ್ತು. ಆದರೆ ಈಗ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆಯ ಆಗರವಾಗಿದೆ.

Advertisements

ವಿದ್ಯುತ್ ಬಿಲ್ ಪಾವತಿಸದ ಕಾರಣ ಕಳೆದ ಹದಿನೈದು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಕ್ಯಾಂಟೀನ್‍ನಲ್ಲಿ ಕೆಲಸ ಮಾಡುವವರಿಗೆ ಕಳೆದ ಐದಾರು ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದಾಗಿ ಕೆಲಸಗಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹತ್ತು ದಿನಗಳಿಂದ ಗ್ರೈಂಡರ್ ಕೂಡ ಕೆಟ್ಟು ಹೋಗಿದೆ. ಇದನ್ನೂ ಓದಿ: ಸರ್ಕಾರಿ ಬಸ್ ಚಾಲಕನ ಮೇಲೆ ಟ್ರಾಫಿಕ್ ಸಿಬ್ಬಂದಿಯಿಂದ ಹಲ್ಲೆ

ಸರ್ಕಾರ ಇಂದಿರಾ ಕ್ಯಾಂಟೀನ್ ಹಣ ನೀಡಿದ ಹಿನ್ನಲೆಯಲ್ಲಿ ಬಂದ್ ಮಾಡಲಾಗಿದೆ. ಇದರಿಂದಾಗಿ ಕಡಿಮೆ ಹಣದಲ್ಲಿ ಒಂದೊತ್ತಿನ ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿದ್ದ ಬಡವರು, ಕೂಲಿ ಕಾರ್ಮಿಕರಿಗೆ ಸಂಕಷ್ಟ ಎದುರಾಗಿದೆ. ಈ ಬಗ್ಗೆ ತಹಸೀಲ್ದಾರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಕ್ರಮ ಕೈಗೊಳ್ಳದೆ ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ. ಪ್ರತಿನಿತ್ಯ ಕೆಲಸಗಾರರು ಬಂದು ಕ್ಯಾಂಟೀನ್ ಸ್ವಚ್ಛಗೊಳಿಸುತ್ತಿದ್ದರು. ಸರ್ಕಾರ ಸಮಸ್ಯೆ ಬಗೆಹರಿಸದ ಕಾರಣ ಕ್ಯಾಂಟೀನ್‍ಗೆ ಬೀಗ ಜಡಿಯಲಾಗಿದೆ. ಇದನ್ನೂ ಓದಿ: ಗಣೇಶನ ಜೊತೆಗೆ ಈ ಊರಿನಲ್ಲಿ ನಡೆಯುತ್ತೆ ಮೂಷಿಕನಿಗೂ ವಿಶೇಷ ಪೂಜೆ

Advertisements

Live Tv

Advertisements
Exit mobile version