ಹಾಸನ: ಸಾರಿಗೆ ಸಂಸ್ಥೆಯ ಬಸ್ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, 25 ಮಂದಿ ಗಾಯಗೊಂಡಿರುವ ಘಟನೆ ಚನ್ನರಾಯಪಟ್ಟಣದ ಹಿರೀಸಾವೆ ಗ್ರಾಮದಲ್ಲಿ ನಡೆದಿದೆ.
ತಡರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಂಟ್ವಾಳ ತಾಲೂಕಿನ ಮಾನಿ ಗ್ರಾಮದ ಅಭಿಷೇಕ್(29) ಮೃತ ದುರ್ದೈವಿ. 46 ಮಂದಿ ಪ್ರಯಾಣಿಕರನ್ನು ತುಂಬಿಕೊಂಡ ಬಸ್ ಮಂಗಳೂರು ಕಡೆಯಿಂದ ಬೆಂಗಳೂರು ಕಡೆ ತೆರಳುತಿತ್ತು. ಈ ವೇಳೆ ಹಿರೀಸಾವೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವಘಡಕ್ಕೀಡಾಗಿದೆ.
Advertisement
ನಿಯಂತ್ರಣ ತಪ್ಪಿದ ಬಸ್ ರಸ್ತೆಗೆ ಉರುಳಿ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಕೆಲಕಾಲ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಹಿರಿಸಾವೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
Advertisement
ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.