– ಚಂದ್ರೇಗೌಡರಿಗೆ ಒಲಿದ ಅದೃಷ್ಟ – ಲತಾದೇವಿ ಉಪಾಧ್ಯಕ್ಷೆ!
– ಶಿರಾಳಕೊಪ್ಪ ಪುರಸಭೆಯಲ್ಲಿ 25 ವರ್ಷಗಳ ಬಳಿಕ ಕಾಂಗ್ರೆಸ್‌ಗೆ ಅಧಿಕಾರ
ಹಾಸನ: ನಗರದಲ್ಲಿ ಮತ್ತೆ ಜೆಡಿಎಸ್-ಬಿಜೆಪಿ (BJP-JDS) ಸಂಘರ್ಷ ಮುಂದುವರಿದಿದೆ. ಹಾಸನ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಪ್ರೀತಂಗೌಡ (Preetham Gowda) -ಜೆಡಿಎಸ್‌ನ ಸ್ವರೂಪ್ ಪ್ರಕಾಶ್ ಬೆಂಬಲಿಗರ ಮಧ್ಯೆ ಜಿದ್ದಾಜಿದ್ದಿ ನಡೆದಿದೆ. ಅಂತಿಮವಾಗಿ ಜೆಡಿಎಸ್‌ನ ಸ್ವರೂಪ್‌ಗೌಡ ಬೆಂಬಲಿಗರು ಮೇಲುಗೈ ಸಾಧಿಸಿದ್ದು, ಹಾಸನ ನಗರಸಭೆ (Hassan Municipality) ಜೆಡಿಎಸ್ ಪಾಲಾಗಿದೆ.
ಅಧ್ಯಕ್ಷರಾಗಿ ಜೆಡಿಎಸ್ (JDS) ಚಂದ್ರೇಗೌಡ ಆಯ್ಕೆಯಾಗಿದ್ದಾರೆ. ಜೆಡಿಎಸ್‌ಗೆ ಮತ ಹಾಕದೇ ಬಿಜೆಪಿ ಸದಸ್ಯರು ತಟಸ್ಥವಾಗಿ ಉಳಿದಿದ್ದಾರೆ. ಇನ್ನು, ಬಿಜೆಪಿಯ ಲತಾದೇವಿ ಜೆಡಿಎಸ್‌ನಲ್ಲಿ ಗುರುತಿಸಿಕೊಂಡು ಉಪಾಧ್ಯಕ್ಷೆಯಾಗಿದ್ದಾರೆ. ಮೈತ್ರಿಯಂತೆ ಉಪಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಬಿಜೆಪಿ, ಶಿಲ್ಪಾವಿಕ್ರಮ್‌ರನ್ನು ಇಳಿಸಿತ್ತು. ಆದರೆ, ವಿಪ್ ಜಾರಿ ಹಿನ್ನೆಲೆಯಲ್ಲಿ ಶಿಲ್ಪಾವಿಕ್ರಂಗೆ ಕೈ ಎತ್ತುವ ಮೂಲಕ ತಮ್ಮ ವಿರುದ್ಧವೇ ಲತಾದೇವಿ ಮತ ಹಾಕಿದ್ದರು. ಆದರೆ, ಲತಾದೇವಿಗೆ ಜೆಡಿಎಸ್‌ನವರು ಹೆಚ್ಚು ವೋಟ್ ಹಾಕಿ ಗೆಲ್ಲಿಸಿಕೊಂಡಿದ್ದಾರೆ. ಇದನ್ನೂ ಓದಿ: ನರ್ಸರಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ – ಭುಗಿಲೆದ್ದ ಹಿಂಸಾಚಾರ; 72 ಮಂದಿ ಅರೆಸ್ಟ್!
ಕೊನೇ ಕ್ಷಣದಲ್ಲಿ ಗಿರೀಶ್ ಚನ್ನವೀರಪ್ಪರನ್ನು ಅಧ್ಯಕ್ಷ ಸ್ಥಾನಕ್ಕೆ ರೇವಣ್ಣ ಅಖಾಡಕ್ಕೆ ಇಳಿಸಿದ್ದರು. ಆದರೆ, ಶಾಸಕ ಸ್ವರೂಪ್ ಪ್ರಕಾಶ್ ತಮ್ಮ ಬೆಂಬಲಿಗರನ್ನು ಗೆಲ್ಲಿಸಿಕೊಂಡಿದ್ದು, ಹೆಚ್.ಡಿ.ರೇವಣ್ಣ, ಪ್ರೀತಂಗೌಡಗೂ ಟಾಂಗ್ ಕೊಟ್ಟಿದ್ದಾರೆ. ಮೈತ್ರಿ ಧರ್ಮ ಪಾಲಿಸಿಲ್ಲ ಅಂತ ಸ್ವರೂಪ್ ವಿರುದ್ಧ ಪ್ರೀತಂಗೌಡ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನ್ಯಾಯ ಒದಗಿಸುವುದಕ್ಕಿಂತ ಅಪರಾಧ ಮರೆಮಾಚಲು ಹೆಚ್ಚಿನ ಪ್ರಯತ್ನ – ರಾಗಾ ಆಕ್ರೋಶ
ಮತ್ತೊಂದುಕಡೆ, ಕಾರವಾರ ನಗರಸಭೆಯಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಜಯವಾಗಿದೆ. ಬಿಜೆಪಿಯ ರವಿರಾಜ್ ಅಂಕೋಲೇಕರ್ ಅಧ್ಯಕ್ಷರಾದರೆ. ಜೆಡಿಎಸ್‌ನ ಪ್ರೀತಿ ಮಧುಕರ್ ಜೋಶಿ ಉಪಾಧ್ಯಕ್ಷರಾಗಿದ್ದರೆ. ಹಾಸನ, ಕಾರವಾರ ಎರಡೂ ಕಡೆ ಕಾಂಗ್ರೆಸ್‌ಗೆ ಸೋಲಾಗಿದೆ. ಆದರೆ, ವಿಜಯೇಂದ್ರ ಸ್ವಕ್ಷೇತ್ರ ಶಿಕಾರಿಪುರದ ಶಿರಾಳಕೊಪ್ಪ ಪುರಸಭೆಯಲ್ಲಿ 25 ವರ್ಷಗಳ ಬಳಿಕ ಕಾಂಗ್ರೆಸ್ ಅಧಿಕಾರಕ್ಕೇರಿದೆ. ಇದನ್ನೂ ಓದಿ: ಅಗತ್ಯಬಿದ್ದರೇ ಮುಲಾಜಿಲ್ಲದೇ ಕುಮಾರಸ್ವಾಮಿ ಅರೆಸ್ಟ್ – ಸಿದ್ದರಾಮಯ್ಯ ವಾರ್ನಿಂಗ್