– ಎನ್‌ಡಿಎ ಅಭ್ಯರ್ಥಿ ಯಾರೇ ಇದ್ರೂ ಬೆಂಬಲಿಸೋದು ನನ್ನ ಕರ್ತವ್ಯ
ಮೈಸೂರು: ಹಾಸನ (Hassan) ಲೋಕಸಭಾ ಚುನಾವಣೆ ವಿಚಾರದಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಹಾಗೂ ಪ್ರೀತಂಗೌಡ (Preetham Gowda) ನಡುವೆ ವೈಮನಸ್ಸು ಮುಂದುವರಿದಿದೆ. ಇನ್ನೂ ಪ್ರಜ್ವಲ್ ಪರ ಪ್ರಚಾರದ ಕುರಿತು ಮಾತನಾಡುವಾಗಲೂ ಪ್ರೀತಂ ಎಲ್ಲಿಯೂ ಪ್ರಜ್ವಲ್ ರೇವಣ್ಣ ಹೆಸರು ಹೇಳದೆ ಕೇವಲ ಎನ್‌ಡಿಎ ಅಭ್ಯರ್ಥಿ ಎಂದು ಉಲ್ಲೇಖಿಸಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.
Advertisement
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರೀತಂ, ನನ್ನನ್ನು ಕಾಶ್ಮೀರಕ್ಕೆ ಹೋಗು ಅಂದ್ರೆ ಹೋಗುತ್ತೇನೆ. ಕನ್ಯಾಕುಮಾರಿಗೆ ಹೋಗು ಅಂದ್ರೂ ಹೋಗುತ್ತೇನೆ. ಪಕ್ಷ ಹೇಳಿದ ಕಡೆ ಹೋಗುತ್ತೇನೆ. ನಾನು ಪಕ್ಷದ ಪ್ರಧಾನ ಕಾರ್ಯದರ್ಶಿ. ಅದಕ್ಕಾಗಿ ಮೈಸೂರಿಗೆ ಬಂದಿದ್ದೇನೆ. ಇಂದು ಮೈಸೂರು ಚಾಮರಾಜನಗರ ಕಾರ್ಯಕರ್ತರ ಸಭೆ ಮಾಡುತ್ತೇನೆ. ಸದಾನಂದ ಗೌಡರು ಹಾಸನಕ್ಕೆ ಹೋಗಿದ್ದರು. ಯಾಕೆ ಹಾಸನಕ್ಕೆ ಹೋಗಿದ್ರಿ ಅಂತ ಕೇಳೋಕೆ ಆಗುತ್ತಾ? ನಾನು ಪಕ್ಷ ಹೇಳಿದ ಕಡೆ ಹೋಗುತ್ತೇನೆ ಎಂದರು. ಇದನ್ನೂ ಓದಿ: ಇಬ್ಬರಲ್ಲಿ ಕಾಲರಾ ದೃಢವಾಗ್ತಿದ್ದಂತೆ ಹಾಸ್ಟೆಲ್ ಖಾಲಿ ಮಾಡಿ ಹೊರಟ ಸ್ಟೂಡೆಂಟ್ಸ್!
Advertisement
Advertisement
ಪ್ರಜ್ವಲ್ ರೇವಣ್ಣ ಭೇಟಿ ವಿಚಾರ ಗೊತ್ತಿಲ್ಲ, ನನಗೆ ಮಾಹಿತಿ ಇಲ್ಲ. ಎನ್‌ಡಿಎ ಅಭ್ಯರ್ಥಿ ಗೆಲ್ಲಬೇಕು. ಪ್ರೀತಂಗೌಡ ಮುಖ ನೋಡಿ ಜನ ವೋಟ್ ಹಾಕಲ್ಲ. ನಮ್ಮ ಮನೆಯಲ್ಲೂ ಮೋದಿ ಮುಖ ನೋಡಿ ಮತ ಹಾಕುತ್ತಾರೆ. ಇದು ಪಂಚಾಯಿತಿ ಚುನಾವಣೆಯಲ್ಲ, ದೇಶದ ಚುನಾವಣೆ. ಪಕ್ಷ ಸೂಚನೆ ಕೊಟ್ಟಂತೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: RSS ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ: ಪ್ರಜ್ವಲ್ ರೇವಣ್ಣ ಕ್ಷಮೆ
Advertisement
ಮಾಧ್ಯಮದವರು ಎಷ್ಟೇ ಪ್ರಶ್ನೆ ಮಾಡಿದರೂ ಪ್ರೀತಂಗೌಡ ಒಮ್ಮೆಯೂ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ಹೆಸರು ಹೇಳಿಲ್ಲ. ಪ್ರತಿ ಪ್ರಶ್ನೆಗಳಿಗೆ ನಾನು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಎನ್‌ಡಿಎ ಅಭ್ಯರ್ಥಿ ಗೆಲ್ಲುತ್ತಾರೆ ಎಂದಷ್ಟೇ ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪ್ರಣಾಳಿಕೆ ಪಾಕ್ ಚುನಾವಣೆಗೆ ಹೆಚ್ಚು ಸೂಕ್ತವಾಗಿದೆ: ಹಿಮಂತ್ ಶರ್ಮಾ