ಹಾಸನ: ಸರ್ಕಾರಿ ಆಸ್ಪತ್ರೆ ಮಹಿಳಾ ವೈದ್ಯರೊಬ್ಬರು ಗರ್ಭಿಣಿಯ ಬಳಿ ಲಂಚಪಡೆದಿದ್ದಾರೆ ಎನ್ನಲಾದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹಾಸನ ಜಿಲ್ಲೆ ಅರಕಲಗೂಡು ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಅರಕಲಗೂಡು ಸರ್ಕಾರಿ ಆಸ್ಪತ್ರೆಯ ಡಾ. ಪುಷ್ಪಲತಾ ಲಂಚ ಪಡೆದ ವೈದ್ಯೆ.
ಗರ್ಭಿಣಿ ಪ್ರತಿ ಬಾರಿಯಂತೆ ಈ ಬಾರಿಯೂ ವೈದ್ಯರ ಬಳಿ ಮಾಸಿಕ ಪರೀಕ್ಷೆಗೆ ಬಂದಿದ್ದರು. ಆ ಸಂದರ್ಭದಲ್ಲಿ ಮಹಿಳೆಯಿಂದ ಒಂದು ಸಾವಿರ ಹಣ ಪಡೆಯುವ ದೃಶ್ಯಾವಳಿ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತನ್ನ ಪೋಷಕರೊಂದಿಗೆ ಆಸ್ಪತ್ರೆಗೆ ಬಂದ ಮಹಿಳೆ ಬಳಿ ವೈದ್ಯೆ ನಿರ್ಲಕ್ಷ್ಯವಾಗಿ ಮಾತನಾಡಿದ್ದಾರೆ. ಮತ್ತು ಲಂಚವನ್ನು ಪಡೆದಿದ್ದಾರೆ ಗರ್ಭಿಣಿಯ ಪೋಷಕರು ಆರೋಪಿಸಿರುವ ವೀಡಿಯೋ ವಾಟ್ಸಾಪ್ ಮತ್ತು ಫೇಸ್ ಬುಕ್‍ನಲ್ಲಿ ಹರಿದಾಡುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv