Monday, 17th February 2020

ಪ್ರೀತಿಗೆ ಕುಟುಂಬಸ್ಥರ ವಿರೋಧ- ಪ್ರೇಮಿಗಳು ಆತ್ಮಹತ್ಯೆಗೆ ಶರಣು

ಹಾಸನ: ಪ್ರೀತಿಗೆ ಕುಟುಂಬಸ್ಥರ ವಿರೋಧ ವ್ಯಕ್ತವಾಗಿದ್ದರಿಂದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾದ ಘಟನೆ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ.

ಕೊಡಗು ಮೂಲದ ಪ್ರವೀಣ್ (25) ಹಾಗೂ ಪಲ್ಲವಿ (20) ಮೃತ ಪ್ರೇಮಿಗಳು. ಸಕಲೇಶಪುರ ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯದ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರವೀಣ್ ಹಾಗೂ ಪಲ್ಲವಿ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದಕ್ಕೆ ಕುಟುಂಬಸ್ಥರು ವ್ಯಕ್ತಪಡಿಸಿದ್ದರು. ಇದರಿಂದಾಗಿ ಎರಡು ದಿನಗಳ ಹಿಂದೆ ಮನೆಬಿಟ್ಟಿದ್ದ ಪ್ರೇಮಿಗಳು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಅಯ್ಯಪ್ಪಸ್ವಾಮಿ ದೇವಾಲಯದ ಬಳಿಯ ಕೆರೆಯಲ್ಲಿ ಮೃತಗಳು ತೇಲುತ್ತಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸಕಲೇಶಪುರ ಗ್ರಾಮಾಂತರ ಪೊಲೀಸರು ಮೃತದೇಹಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Leave a Reply

Your email address will not be published. Required fields are marked *