ಹಾಸನ: ದೇಶದ ರೈತರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೆದರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂರು ಕೃಷಿ ಕಾಯ್ದೆ ಹಿಂಪಡೆದಿದ್ದು ಅವರಿಗೆ ಇದು ಎಚ್ಚರಿಕೆ ಗಂಟೆ ಆಗಿದೆ ಎಂದು ಶಾಸಕ ಕೆ.ಎಮ್.ಶಿವಲಿಂಗೇಗೌಡ ತಿಳಿಸಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ದೇಶದಲ್ಲಿ ರೈತರನ್ನು ಬಿಟ್ಟು ಯಾರು ರಾಜಕಾರಣ ಮಾಡಲು ಸಾಧ್ಯವಿಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ. ಈ ಕೃಷಿ ಕಾಯ್ದೆಯನ್ನು ಹಲವು ತಿಂಗಳುಗಳ ಹಿಂದೆಯೇ ಹಿಂಪಡೆಯಬೇಕಾಗಿತ್ತು. ಆದರೆ ಇದುವರೆಗೂ ರೈತರ ಬಲಿ ಪಡೆದಿರುವ ಬಿಜೆಪಿ ಸರ್ಕಾರ ರೈತ ವಿರೋಧಿ ಕೆಲಸ ಮಾಡಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಜನರ ಕಲಿಸಲಿದ್ದಾರೆ ಎಂದರು.
Advertisement
ಕೃಷಿ ಕಾಯ್ದೆ ಹಿಂಪಡೆಯುವಂತೆ ಹಲವು ತಿಂಗಳಿಂದ ಹೋರಾಟ ನಡೆಸುತ್ತಿರುವ ರೈತರನ್ನು ನರಮೇಧ ಮಾಡಿದ ಬಿಜೆಪಿ ಸರ್ಕಾರ, ಇದುವರೆಗೆ ಸುಮಾರು 700 ಜನ ರೈತರ ಪ್ರಾಣವನ್ನು ತೆಗೆದು ಕರಾಳ ಶಾಸನ ವಾಪಸ್ ಪಡೆದಿದ್ದಾರೆ. ವಿಳಂಬ ನೀತಿಯೇ ಬಿಜೆಪಿ ಸರ್ಕಾರಕ್ಕೆ ನಾಚಿಕೆಯಾಗಲ್ವಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಹೋರಾಟದಿಂದ ಮೃತಪಟ್ಟ ರೈತರಿಗೆ 25 ಲಕ್ಷ ರೂಪಾಯಿ ಪರಿಹಾರ ಕೊಡಿ: ಸಿದ್ದರಾಮಯ್ಯ
Advertisement
Advertisement
ಇದೀಗ ನರೇಂದ್ರ ಮೋದಿ ಬಿಜೆಪಿಯವರಿಗೆ ಬುದ್ಧಿ ಬಂದಿದ್ದು ಉತ್ತರ ಭಾರತದಲ್ಲಿ ಚುನಾವಣೆ ಬಂದಿದೆ ಎಂದು ಕರಾಳ ಶಾಸನ ವಾಪಸ್ ಪಡೆದಿದ್ದೀರಿ. ರೈತರನ್ನು ಏನೆಂದುಕೊಂಡಿದ್ದೀರಿ. ಅದರ ಪರಿಣಾಮ ಮುಂದಿನ ದಿನಗಳಲ್ಲಿ ಎದುರಿಸುತ್ತೀರಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಆಂಧ್ರದ ಕಡಪಾದಲ್ಲಿ ಪ್ರವಾಹ – ಮೂವರು ಸಾವು, 30 ಮಂದಿ ನಾಪತ್ತೆ
ಕಾಯ್ದೆ ಹಿಂಪಡೆದಿರುವುದು ಸ್ವಾಗತಾರ್ಹ ಆದರೆ ಇಷ್ಟು ದಿನ ಏನು ಮಾಡುತ್ತಿದ್ದೀರಿ. ನೀವು ರೈತರ ನರಮೇಧ ಮಾಡಿದ್ದೀರಿ ನಮ್ಮದು ರೈತರ ಪರವಾದ ಸರ್ಕಾರ ಈ ಕಾಯ್ದೆ ವಿರುದ್ಧ ನಾವು ಕೂಡ ಹೋರಾಟ ಮಾಡಿದ್ದೇವೆ ಎಂದು ಜೆಡಿಎಸ್ ಪಕ್ಷ ಈ ಹಿಂದೆ ನಡೆಸಿದ ಹೋರಾಟವನ್ನು ಶಿವಲಿಂಗೇಗೌಡರು ಸಮರ್ಥಿಸಿಕೊಂಡರು.