ಹಾಸನ: ಕಳೆದ 31 ವರ್ಷಗಳಿಂದ ಸಿಆರ್‌ಪಿಎಫ್ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲೆಯ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪಿರುವ ಘಟನೆ ಮಣಿಪುರದಲ್ಲಿ (Manipur) ನಡೆದಿದೆ.
ಜಿಲ್ಲೆಯ ಕೆ.ಆರ್.ಪುರಂನ ಪದ್ಮರಾಜು (52) ಮೃತ ಯೋಧರು. ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಶುಕ್ರವಾರ ಮಣಿಪುರದಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಬೆಳಗ್ಗೆ 11ರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
Advertisement
ಮೃತ ಯೋಧ ಪದ್ಮರಾಜು ಕಳೆದ 31 ವರ್ಷಗಳಿಂದ ಸಿಆರ್‌ಪಿಎಫ್ ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಣಿಪುರದಲ್ಲಿ ನಡೆದ ಹಿಂಸಾಚಾರದ ವೇಳೆಯೂ ಅವರು ಕರ್ತವ್ಯ ನಿರ್ವಹಿಸಿದ್ದರು ಎಂದು ತಿಳಿದುಬಂದಿದೆ.
Advertisement
Advertisement
ಕೆ.ಆರ್.ಪುರಂನ ಅವರ ನಿವಾಸಕ್ಕೆ ಪಾರ್ಥಿವ ಶರೀರ ತರಲಾಗಿದ್ದು, ನೂರಾರು ಮಂದಿ ಮೃತ ಯೋಧನ ಅಂತಿಮ ದರ್ಶನಕ್ಕೆ ಬರುತ್ತಿದ್ದಾರೆ. ಇಂದು (ಶನಿವಾರ) ಮಧ್ಯಾಹ್ನ ಹಾಸನ (Hassan) ನಗರ ಹೊರವಲಯದ ಬಿಟ್ಟಗೋಡನಹಳ್ಳಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Advertisement
ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದು, ಕುಟುಂಬದಲ್ಲಿ ನೀರವ ಮೌನ ಆವರಿಸಿದೆ. ಇದನ್ನೂ ಓದಿ: ಠಾಣೆಯಲ್ಲಿ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡ್ತಿದ್ದಾಗ ಮಹಿಳೆಗೆ ಗುಂಡೇಟು – ಸ್ಥಿತಿ ಗಂಭೀರ