ರಾಮನಗರ: ಹಾಸನದಿಂದ (Hassan) ಭವಾನಿ ರೇವಣ್ಣ (Bhavani Revanna) ಅವರಿಗೆ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯೆ ನೀಡಿದ್ದಾರೆ.
ಪ್ರತಿಭಟನೆಯನ್ನು ಎಲ್ಲರೂ ಮಾಡುತ್ತಾರೆ. ನಿನ್ನೆ ಸ್ವರೂಪ್ (Swaroop) ಬೆಂಬಲಿಗರು ಮಾಡಿದ್ರು. ಇಂದು ಭವಾನಿ ರೇವಣ್ಣ ಪರವಾಗಿ ಮಾಡುತ್ತಿದ್ದಾರೆ. ನಾನು ಎಲ್ಲವನ್ನೂ ಗಮನಿಸಿದ್ದೇನೆ. ಹಾಗಂತ ಎಲ್ಲರಿಗೂ ಟಿಕೆಟ್ ಕೊಡೋದಕ್ಕೆ ಆಗಲ್ಲ. ಈ ಬಗ್ಗೆ ಅಂತಿಮ ನಿರ್ಣಯ ಮಾಡಲಾಗುತ್ತದೆ ಎಂದರು.
Advertisement
Advertisement
ಮಾಜಿ ಪ್ರಧಾನಿ ದೇವೇಗೌಡರು (HD Deve Gowda) ಹಾಸನದ ಟಿಕೆಟ್ ವಿಚಾರವಾಗಿ ಮಧ್ಯಸ್ಥಿಕೆ ವಹಿಸುತ್ತಾರಾ ಎಂಬ ಪ್ರಶ್ನೆಗೆ ಉತ್ತಿರಿಸಿದ ಅವರು, ಸದ್ಯ ಹೆಚ್‌ಡಿ ದೇವೇಗೌಡರ ಆರೋಗ್ಯದ ಪರಿಸ್ಥಿತಿ ಸರಿಯಿಲ್ಲ. ಈ ವಿಚಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವುದು ಅವರಿಂದ ಅಸಾಧ್ಯ. ಅದಕ್ಕಾಗಿ ಎಲ್ಲರೂ ಈ ಬಗ್ಗೆ ಕೂತು ಚರ್ಚೆ ಮಾಡಿ ಬಗೆಹರಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ನೀವು ವೋಟು ಹಾಕದೇ ಮನೆಯಲ್ಲಿಯೇ ಕುಳಿತರೆ ಬಿಜೆಪಿಗೆ ಲಾಭ: ಮುಸ್ಲಿಮರಲ್ಲಿ ಜಮೀರ್ ಮನವಿ
Advertisement
Advertisement
ಅಭ್ಯರ್ಥಿಯಾಗಬೇಕು ಎಂಬ ಆಸೆ ಇದ್ದವರು ಈ ರೀತಿಯ ಒತ್ತಡ ಹಾಕುವುದು, ಪ್ರತಿಭಟನೆ ಮಾಡುವುದು ಸಹಜ. ಸದ್ಯದಲ್ಲೇ ಬಿಡುಗಡೆಯಾಗಲಿರುವ 2ನೇ ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಕೂಡಾ ಫೈನಲ್ ಆಗಲಿದೆ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇದನ್ನೂ ಓದಿ: ಹಾಸನ ರಾಜಕೀಯ ಡೊಂಬರಾಟಕ್ಕೆ ರೇವಣ್ಣ ಕಾರಣ: ಎ.ಟಿ.ರಾಮಸ್ವಾಮಿ