ಬೆಂಗಳೂರು: ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೊರಡಿಸಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್‌ಗೆ (Karnataka High Court) ಪ್ರಜ್ವಲ್ ರೇವಣ್ಣ (Prajwal Revanna) ಮನವಿ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ವರೆಗೂ, ಪಿಎಂ ಸ್ಥಾನದಿಂದ ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ನಾಮಪತ್ರದಲ್ಲಿ ಸುಳ್ಳು ಮಾಹಿತಿ – ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ
Advertisement
Advertisement
ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಒದಗಿಸಿದ್ದ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಸದಸ್ಯ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ತೀರ್ಪು ನೀಡಿತ್ತು.
Advertisement
ಲೋಕಸಭೆಗೆ 2019ರ ಏಪ್ರಿಲ್ 18 ರಂದು ಚುನಾವಣೆ ನಡೆಯಿತು. ಮೇ 23 ರಂದು ಫಲಿತಾಂಶ ಪ್ರಕಟವಾಗಿತ್ತು. ಪ್ರಜ್ವಲ್ ರೇವಣ್ಣ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಪ್ರಜ್ವಲ್ ರೇವಣ್ಣ ಗೆಲುವಿನ ಬಗ್ಗೆ ಬಿಜೆಪಿಗೆ ಸೇರಿದ್ದ ಜಿ.ದೇವರಾಜೇಗೌಡ 2019 ರಲ್ಲಿ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿಗಳನ್ನು ಸಲ್ಲಿಸಿದ್ದರು. ಇದನ್ನೂ ಓದಿ: ಪ್ರಜ್ವಲ್ ಜೊತೆ ರೇವಣ್ಣ, ಎ ಮಂಜು ಅನರ್ಹರಾಗುತ್ತಾರೆ: ಪ್ರಮೀಳಾ ನೇಸರ್ಗಿ
Advertisement
ಪ್ರಜ್ವಲ್ ರೇವಣ್ಣ ಅವರು ಚುನಾವಣೆಯಲ್ಲಿ ಅಕ್ರಮ ನಡೆಸಿ ಗೆಲುವು ಸಾಧಿಸಿದ್ದಾರೆ. ಅವರ ಸದಸ್ಯತ್ವವನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದರು.
Web Stories