ಹಾಸನ: ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ, ದೊಡ್ಡೇರಿ ಕಾವಲು ಗೇಟ್ ಬಳಿ ಘಟನೆ ನಡೆದಿದೆ.
Advertisement
ಮಹದೇವ್ (43) ಮೃತನಾಗಿದ್ದಾನೆ. ಈತ ಮಡಿಕೇರಿ ಮೂಲದವನಾಗಿದ್ದಾನೆ. ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಹಾಸನ ಕಡೆ ಹೋಗುತ್ತಿದ್ದ ಸ್ಕೂಟರ್‍ಗೆ, ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಕಾಟಾಚಾರದ ಬೆಳೆ ವೀಕ್ಷಣೆ ಮಾಡಿದ ಸಚಿವ ಪ್ರಭು ಚವ್ಹಾಣ್
Advertisement
Advertisement
ಸ್ಕೂಟರ್ ಸವಾರ ಹೆದ್ದಾರಿಯ ಮಧ್ಯದಲ್ಲೇ ಬಿದ್ದು, ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾನೆ. ಅಪಘಾತದ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದೆ. ಅಪಘಾತದಿಂದ ಮೃತಪಟ್ಟ ಮಹದೇವ್ ಕುಟುಂಬಸ್ಥರ ಆಕ್ರಂಧನ ಮುಗಿಲುಮುಟ್ಟಿದೆ. ಹಿರೀಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.