Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನಾಂಬಾ ಉತ್ಸವ ವಿಐಪಿ ಸಂಪ್ರದಾಯಕ್ಕೆ ಬ್ರೇಕ್, ಜನಸ್ನೇಹಿ ಉತ್ಸವಕ್ಕೆ ಅಂಕಿತ: ಕೃಷ್ಣ ಬೈರೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಾಸನಾಂಬಾ ಉತ್ಸವ ವಿಐಪಿ ಸಂಪ್ರದಾಯಕ್ಕೆ ಬ್ರೇಕ್, ಜನಸ್ನೇಹಿ ಉತ್ಸವಕ್ಕೆ ಅಂಕಿತ: ಕೃಷ್ಣ ಬೈರೇಗೌಡ

Latest

ಹಾಸನಾಂಬಾ ಉತ್ಸವ ವಿಐಪಿ ಸಂಪ್ರದಾಯಕ್ಕೆ ಬ್ರೇಕ್, ಜನಸ್ನೇಹಿ ಉತ್ಸವಕ್ಕೆ ಅಂಕಿತ: ಕೃಷ್ಣ ಬೈರೇಗೌಡ

Public TV
Last updated: October 6, 2025 11:18 pm
Public TV
Share
3 Min Read
Krishna Byre Gowda
SHARE

 – ಅ.9ರಿಂದ 23ರ ವರೆಗೆ ಹಾಸನಾಂಬೆ ಉತ್ಸವ – 25 ಲಕ್ಷ ಭಕ್ತರ ಆಗಮನ ನಿರೀಕ್ಷೆ

ಬೆಂಗಳೂರು: ಅಕ್ಟೋಬರ್ 9ರಿಂದ ಅಕ್ಟೋಬರ್ 23ರವರೆಗೆ ಹಾಸನಂಬೆ ಉತ್ಸವ ನಡೆಯಲಿದೆ. ಹಾಸನಾಂಬಾ ಉತ್ಸವದಲ್ಲಿ (Hassanamba Jatre) ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ನೀಡಿ ಜನಸ್ನೇಹಿ ಉತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ತಿಳಿಸಿದರು.

ವಿಕಾಸಸೌಧದಲ್ಲಿ ಸೋಮವಾರ ಹಾಸನ (Hassan) ಜಿಲ್ಲೆಯ ಶಾಸಕರು ಸಂಸದರು ಹಾಗೂ ಅಧಿಕಾರಿಗಳು ಜೊತೆ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಾಸನಾಂಬಾ ಉತ್ಸವದಲ್ಲಿ ವಿಐಪಿ ಸಂಸ್ಕೃತಿಯಿಂದ ಸ್ಥಳೀಯರು ಬೇಸತ್ತಿದ್ದು, ಈ ವರ್ಷದಿಂದ ಈ ಸಂಸ್ಕೃತಿಕ ತಿಲಾಂಜಲಿ ಹಾಡಲಾಗುವುದು. ಅಲ್ಲದೇ ಜನಸ್ನೇಹಿ ಹಾಸನಾಂಬಾ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ವಿಶೇಷ ಪ್ಯಾಕೇಜ್ – ಬೆಂಗಳೂರಿಂದ 2016 ರೂ., ಮೈಸೂರಿಂದ 1250 ರೂ.

hasanamba temple hassan

ಕಳೆದ ವರ್ಷ ಹಾಸನದಲ್ಲಿ ವಿಐಪಿಗಳ ಎಸ್ಕಾರ್ಟ್‌ಗಳದ್ದೇ ಸದ್ದು ಹೆಚ್ಚಾಗಿತ್ತು. ಆದರೆ, ಈ ವರ್ಷ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಮಾಜಿ ಪ್ರಧಾನಿಗಳಿಗೆ ಮಾತ್ರ ಎಸ್ಕಾರ್ಟ್ ವ್ಯವಸ್ಥೆ ನೀಡಲಾಗುವುದುಎಂದು ಮಾಹಿತಿ ನೀಡಿದರು.

ಮುಂದುವರೆದು, ಶಾಸಕರು, ಸಚಿವರು ನ್ಯಾಯಾಧೀಶರು, ಕ್ರೀಡಾಪಟುಗಳು, ಸಿನಿಮಾ ತಾರೆಯರು ಸೇರಿದಂತೆ ಉಳಿದ ಗಣ್ಯ ವ್ಯಕ್ತಿಗಳು ತಾವು ದೇವಾಲಯಕ್ಕೆ ಭೇಟಿ ನೀಡುವ ಬಗ್ಗೆ ಇ-ಮೇಲ್ ಅಥವಾ ಫೋನ್ ಕರೆಗಳ ಮೂಲಕ ಮೊದಲೇ ತಿಳಿಸಬೇಕು. ಮಾಹಿತಿ ನೀಡುವ ಗಣ್ಯವ್ಯಕ್ತಿಗಳನ್ನು ಜಿಲ್ಲಾಡಳಿತ ಏರ್ಪಡಿಸಿರುವ ವಾಹನದಲ್ಲಿ ದೇವಾಲಯಕ್ಕೆ ಕರೆತಂದು ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಗಣ್ಯ ವ್ಯಕ್ತಿಗಳಿಗೆ ತಮ್ಮ ಕುಟುಂಬದ ನಾಲ್ಕು ಜನ ಸದಸ್ಯರನ್ನು ಜೊತೆಗೆ ಕರೆತರಲು ಅವಕಾಶ ನೀಡಲಾಗಿದೆ. ಆದರೆ, ಯಾವುದೇ ಖಾಸಗಿ ವಾಹನಗಳ ಮೂಲಕ ದೇವಾಲಯಕ್ಕೆ ಆಗಮಿಸಲು ಅವಕಾಶ ಇಲ್ಲ ಎಂದು ಅವರು ತಿಳಿಸಿದರು.

hassanamba

ಇದಲ್ಲದೆ, 1000 ರೂ. ಹಾಗೂ 300 ರೂ. ಬೆಲೆಯ ಪಾಸ್‌ಗಳನ್ನೂ ವಿತರಿಸಲಾಗುವುದು. ಪಾಸ್ ಪಡೆದವರಿಗೆ ದೇವರ ದರ್ಶನದ ಜೊತೆಗೆ ಪ್ರಸಾದವನ್ನೂ ನೀಡಲಾಗುವುದು. ಒಂದು ಪಾಸ್‌ಗೆ ಒಬ್ಬರಿಗೆ ಮಾತ್ರ ಅವಕಾಶ ಇರಲಿದೆ. ಎಸ್ಕಾರ್ಟ್‌ನಲ್ಲಿ ಆಗಮಿಸುವವರಿಗೆ ಬೆಳಗ್ಗೆ 10:30 ರಿಂದ 12:30ರ ವರೆಗೆ ಅವಕಾಶ ಇರಲಿದೆ. ಪಾಸ್ ಪಡೆದವರಿಗೆ ಬೆಳಗ್ಗೆ 7:30 ರಿಂದ 10ರ ನಡುವೆ ಪ್ರವೇಶ ನೀಡಲಾಗುವುದು. ಒಂದು ದಿನಕ್ಕೆ 1000 ಪಾಸ್‌ಗಳನ್ನು ಮಾತ್ರ ವಿತರಿಸಲಿದ್ದು, ಸಮಯ ಮೀರಿ ಬಂದವರಿಗೆ ಅವಕಾಶ ಇರುವುದಿಲ್ಲ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ದೇವಾಲಯಕ್ಕೆ ಭೇಟಿ ನೀಡುವವರ ಸಂಖ್ಯೆ ಗಣನೀಯ ಹೆಚ್ಚಳ:
ಹಾಸನಾಂಬಾ ದೇವಾಲಯಕ್ಕೆ 2021 ರಲ್ಲಿ 1ಲಕ್ಷ ಜನ ಮಾತ್ರ ಭೇಟಿ ನೀಡಿದ್ದರು. ಆದರೆ, 2022 ರಲ್ಲಿ 3 ಲಕ್ಷ ಹಾಗೂ 2023 ರಲ್ಲಿ 6 ಲಕ್ಷ ಜನ ಭೇಟಿ ನೀಡಿದ್ದಾರೆ.

ಕಳೆದ ವರ್ಷ 20 ಲಕ್ಷ ಜನ ಭೇಟಿ ನೀಡಿದ್ದಾರೆ. ಹೀಗಾಗಿ ಈ ವರ್ಷ 25ಲಕ್ಷ ಜನ ದೇವಿಯ ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಎಲ್ಲಾ ಇಲಾಖೆಯನ್ನೂ ಒಳಗೊಂಡು ಸುಗಮ ತಯಾರಿಗೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ.

ಈ ಬಾರಿ ಇರಲಿದೆ ಸಾಂಸ್ಕೃತಿಕ ಕಾರ್ಯಕ್ರಮ
ಅಕ್ಟೋಬರ್ 9 ರಿಂದಲೇ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಇರಲಿವೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಮೂರು ವೇದಿಕೆ ಸಿದ್ಧಪಡಿಸಲಾಗಿದ್ದು, ಒಂದು ವೇದಿಕೆಯಲ್ಲಿ ಜಾನಪದ ಜಾತ್ರೆ ನಡೆಸಲಾಗುವುದು. ಈ ವೇದಿಕೆಯಲ್ಲಿ ನಾಡಿನ ನಾನಾ ಭಾಗದ ಜಾನಪದ ಕಲಾವಿದರು ಆಗಮಿಸಿ ನೃತ್ಯ ಪ್ರದರ್ಶಿಸಲಿದ್ದಾರೆ. ಜಾನಪದವನ್ನು ಉಳಿಸಿ ಬೆಳೆಸುವ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆ ಹಮ್ಮಿಕೊಳ್ಳಲಾಗಿದೆ. ಉಳಿದ ಎರಡು ವೇದಿಕೆಯಲ್ಲಿ ಸ್ಥಳೀಯ ಯುವಕ-ಯುವತಿಯರು ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಭಕ್ತಾದಿಗಳಿಗೆ ಈ ವರ್ಷ ನೂತನ ಅನುಭವವಾಗಲಿದೆ.

ಇದರ ಜೊತೆಗೆ ಹೆಲಿ ಟೂರಿಸಂ, ಫಲಪುಷ್ಪ ಪ್ರದರ್ಶನವೂ ಇರಲಿದೆ. ಸ್ತ್ರಿ ಶಕ್ತಿ ಸಂಘಗಳಿಂದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನೂ ಏರ್ಪಡಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಜೊತೆಗೆ ಮಾತನಾಡಿದ್ದು ಹಾಸನಾಂಭ ಟೂರ್ ಪ್ಯಾಕೇಜ್ ಸಹ ಆರಂಭಿಸುವ ಯೋಚನೆ ಇದೆ ಎಂದರು.

ಭದ್ರತೆಗೆ ಒತ್ತು:
ಜನ ಸಂದಣಿ ನಿಯತ್ರಿಸುವ ಸಲುವಾಗಿ 2000 ಪೊಲೀಸರನ್ನು ನೇಮಕ ಮಾಡಲಾಗಿದೆ. 280ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾ ಸಹ ಬಳಕೆಯಲ್ಲಿದ್ದು, ಎಲ್ಲವಕ್ಕೂ ಎಐ ತಂತ್ರಜ್ಞಾನ ಬಳಸಲಾಗಿದೆ. ಸ್ಥಳದಲ್ಲೇ ಕಂಟ್ರೋಲ್ ರೂಂ ನಿರ್ಮಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯಲು ಆಸ್ಪದ ನೀಡಲಾಗುವುದಿಲ್ಲ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಅ.9 ರಿಂದ 23ರವರೆಗೆ ಹಾಸನಾಂಬೆ ಜಾತ್ರೆ – ಈ ಬಾರಿ ವಿಐಪಿ, ವಿವಿಐಪಿ ಪಾಸ್ ಇರಲ್ಲ

TAGGED:hassanHassanamba Jatrekrishna byre gowda
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Indian Ship Carrying LPG
Latest

ಹಾರ್ಮುಜ್‌ ದಾಟಿದ 45,000 ಟನ್‌ ಎಲ್‌ಪಿಜಿ ಹೊತ್ತ ಭಾರತದ ‘ಸರ್ವಶಕ್ತಿ’ ಹಡಗು

Public TV
By Public TV
2 minutes ago
West Bengal Election Missing CCTV footage for long hours Multiple instances of group voting Daylight rigging exposed in Falta constituency
Latest

ಗಂಟೆಗಟ್ಟಲೇ ಸಿಸಿಟಿವಿ ಬಂದ್‌, ಬೂತ್‌ನಿಂದಲೇ ಪ್ರತಿಪಕ್ಷಗಳ ಏಜೆಂಟ್‌ಗಳು ಹೊರಕ್ಕೆ: ಬೆಚ್ಚಿ ಬೀಳಿಸುವಂತಿದೆ ಫಾಲ್ಟಾ ಅಕ್ರಮ

Public TV
By Public TV
23 minutes ago
d.k.shivakumar KPCC
Bengaluru City

ಜೀವರಾಜ್‌ ಜೊತೆ ಕೆಲಸ ಮಾಡ್ತಿದ್ದ ಅಧಿಕಾರಿಗಳನ್ನ ಬಳಸಿಕೊಂಡು ಅಕ್ರಮ: ಡಿಕೆಶಿ ಕೆಂಡಾಮಂಡಲ

Public TV
By Public TV
34 minutes ago
Rajegowda
Chikkamagaluru

ಸ್ಟ್ರಾಂಗ್‌ ರೂಂ ಓಪನ್‌ ಆದಾಗ ಟ್ರಂಕ್‌ನ ಲಾಕ್‌ ಒಡೆದಿದ್ರು, ಸೀಲ್‌ ಇರಲಿಲ್ಲ: ರಾಜೇಗೌಡ ಗಂಭೀರ ಆರೋಪ

Public TV
By Public TV
59 minutes ago
Delhi Building Fire
Latest

ದೆಹಲಿಯ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ; 9 ಮಂದಿ ಸಾವು

Public TV
By Public TV
1 hour ago
R Ashok
Bengaluru City

ಶೃಂಗೇರಿಯಲ್ಲಿ ಸತ್ಯಕ್ಕೆ ಜಯ – ವೋಟ್ ಚೋರ್ ಕೌನ್ ಹೈ? ರಾಹುಲ್ ಗಾಂಧಿ ಹೈ: ಆರ್‌. ಅಶೋಕ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?