40.94 ಕೋಟಿ ರೂ. ಆಸ್ತಿಗೆ ಒಡೆಯ ಹಾಸನದ ಮೈತ್ರಿ ಅಭ್ಯರ್ಥಿ

Public TV
2 Min Read
prajwal revanna

ಹಾಸನ: ಲೋಕಸಭಾ ಚುನಾವಣೆಗೆ (Lok Sabha Election) ಅಖಾಡ ರಂಗೇರಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಆರಂಭಿಸಿದ್ದಾರೆ. ಅದೇ ರೀತಿ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ (Prajwal Revanna) ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದು, ಒಟ್ಟು 40.94 ಕೋಟಿ ರೂ. ಮೌಲ್ಯದ ಚರ ಹಾಗೂ ಸ್ಥಿರಾಸ್ತಿ ಹೊಂದಿರುವುದಾಗಿ ನಾಮಪತ್ರದ ಅಫಿಡವಿಟ್‌ನಲ್ಲಿ (Affidavit) ಮಾಹಿತಿ ನೀಡಿದ್ದಾರೆ.

5.44 ಕೋಟಿ ರೂ. ಮೌಲ್ಯದ ಚರ ಹಾಗೂ 40.94 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಸೇರಿ ಒಟ್ಟು 40.94 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಪ್ರಜ್ವಲ್ ರೇವಣ್ಣ ಹೇಳಿಕೊಂಡಿದ್ದಾರೆ. ಸದ್ಯ 9.29 ಲಕ್ಷ ರೂ. ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ವಿವಿಧ ಬ್ಯಾಂಕ್‌ಗಳ ಉಳಿತಾಯ ಖಾತೆಯಲ್ಲಿ 57 ಲಕ್ಷ ರೂ. ನಗದು ಹೊಂದಿರುವುದಾಗಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 70 ಲಕ್ಷದ ಆಸ್ತಿ ಘೋಷಿಸಿದ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

Prajwal Revanna Nomination

 

ಕಳೆದ ಐದು ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ರೂ. ಆದಾಯಗಳಿಸಿರುವುದಾಗಿ ಹೇಳಿಕೊಂಡಿರುವ ಪ್ರಜ್ವಲ್, ಕೃಷಿಯೇತರ ಮೂಲದಿಂದ 1.33 ಕೋಟಿ ರೂ. ಆದಾಯ ಗಳಿಕೆ ಮಾಡಿದ್ದೇನೆ ಎಂದಿದ್ದಾರೆ. ಹಾಗೆಯೇ 31 ಹಸು, 4 ಎತ್ತು, ಒಂದು ಟ್ರ‍್ಯಾಕ್ಟರ್ ಹೊಂದಿರುವ ಪ್ರಜ್ವಲ್ ರೇವಣ್ಣ, ಬೆಂಗಳೂರು ಮೈಸೂರು ಸೇರಿ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ ಹಾಗೂ ಬೆಂಗಳೂರಿನ ನೆಲಮಂಗಲದಲ್ಲಿ ಆಸ್ತಿ ಹೊಂದಿರುವುದನ್ನು ಬಹಿರಂಗ ಪಡಿಸಿದ್ದಾರೆ. ಇದನ್ನೂ ಓದಿ: ನನ್ನ ಮಗನಿಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದು ಬಿಎಸ್‍ವೈ: ಎಂ.ಚಂದ್ರಪ್ಪ

ಈ ನಡುವೆ ಅತ್ತೆ ಅನುಸೂಯ ಅವರಿಂದ 22 ಲಕ್ಷ ರೂ., ಮತ್ತೊಬ್ಬ ಅತ್ತೆ ಶೈಲಜಾ ಅವರಿಂದ 10 ಲಕ್ಷ ರೂ. ತಂದೆ ರೇವಣ್ಣ ಅವರಿಂದ 86 ಲಕ್ಷ ರೂ. ಹಾಗೂ ಸಹೋದರ, ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರಿಂದ 1 ಕೋಟಿ ರೂ. ಸಾಲ ಹಾಗೂ ಕುಪೇಂದ್ರ ರೆಡ್ಡಿ ಅವರಿಂದ ಸಾಲ ಪಡೆದು ಒಟ್ಟು 4.48 ಕೋಟಿ ಸಾಲ ಹೊಂದಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೇ ಜನ ಒಪ್ಪಲ್ಲ: ಡಿಕೆ ಸುರೇಶ್

ಈ ನಡುವೆ ಸರ್ಕಾರಕ್ಕೆ 3.04 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿರುವ ಅವರು, ತೆರಿಗೆ ಸಲ್ಲಿಕೆ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. 67 ಲಕ್ಷ ರೂ. ಮೌಲ್ಯದ 1 ಕೆಜಿ 100 ಗ್ರಾಂ ಚಿನ್ನ ಮತ್ತು 17.48 ಲಕ್ಷ ರೂ. ಮೌಲ್ಯದ 23 ಕೆಜಿ ಬೆಳ್ಳಿ ಹಾಗೂ 1.90 ಲಕ್ಷ ರೂ. ಮೌಲ್ಯದ ವಜ್ರದ ಆಭರಣ ಹೊಂದಿರುವುದಾಗಿ ಪ್ರಜ್ವಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

Share This Article