– ಸಾರ್ವಜನಿಕರಿಂದ ಮೆಚ್ಚುಗೆ
ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗವನ್ನು ಪೋಷಕರು ದಾನ ಮಾಡಿ ಸಾರ್ಥಕತೆ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್ ಕಳೆದ 15 ದಿನದ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದನು. ಹೀಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಚಿನ್ ಶನಿವಾರ ರಾತ್ರಿ ಮೃತಪಟ್ಟಿದ್ದಾನೆ. ಮಗನ ಸಾವಿನ ನಂತರವೂ ಆತನಿಂದ ಯಾರಿಗಾದರೂ ಸಹಾಯ ಆಗಲಿ ಎಂದು ತಂದೆ-ತಾಯಿ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ತಮ್ಮ ದುಃಖದಲ್ಲೂ ಬೇರೆಯವರ ಹಿತಕ್ಕಾಗಿ ಮಗನ ಅಂಗಾಂಗ ದಾನ ಮಾಡಿದ ತಂದೆ-ತಾಯಿಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.