ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದ ವ್ಯಕ್ತಿಯ ವಿರುದ್ಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸ್ ದಾಖಲಾಗಿದೆ.
ಮೋಹಿತ್ ನರಸಿಂಹಮೂರ್ತಿ ಎಂಬಾತನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಸರ್ಕಾರದ ವಿರುದ್ಧ ಸುಳ್ಳು ಮಾಹಿತಿ ಹಂಚಿರುವ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ಎಫ್‍ಐಆರ್‍ನಲ್ಲಿ ಉಲ್ಲೇಖಿಸಲಾಗಿದೆ.
ಮೋಹಿತ್ ತನ್ನ ಎಕ್ಸ್ ಮತ್ತು ಇನ್‍ಸ್ಟಾಗ್ರಾಂ ಖಾತೆಯಲ್ಲಿ ಸಚಿವರ ವಿರುದ್ಧ ವಿಡಿಯೋ ಪ್ರಕಟಿಸಿದ್ದ. ಅದರಲ್ಲಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಲು ಹಣವೇನು ನಿಮ್ಮಪ್ಪನ ಮನೆಯಿಂದ ತಂದಿದ್ದೀರಾ? ಸಾರ್ವಜನಿಕರ ಹಣ ಲೂಟಿ ಮಾಡಿ ನೀವು ಮತ್ತು ಕುಟುಂಬ ಐಶಾರಾಮಿ ಜೀವನ ನಡೆಸುತ್ತಿದ್ದೀರಾ ಎಂದು ಹೇಳಿಕೊಂಡಿದ್ದ.
ಸದ್ಯ ಆತನ ವಿರುದ್ಧ ಪೊಲೀಸರು (Police) ಎಫ್‍ಐಆರ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.