ಕಲಬುರಗಿ: ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ (BJP) ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್ (Dattatraya C. Patil Revoor) ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪ್ರಚೋದನಕಾರಿ, ದ್ವೇಷಪೂರಿತ ಮತ್ತು ಕೋಮು ಸೌಹಾರ್ದತೆ ಕೆಡಿಸುವ ನಿಟ್ಟಿನಲ್ಲಿ ಭಾಷಣ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಜಗರ್, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ರೆವೂರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಕೇಸ್ ವಾಪಸ್ – ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ
ಇತ್ತೀಚೆಗೆ ಆಳಂದ ಲಾಡ್ಲೆ ಮಶಾಕ್ (Ladle Mashak Dargah) ಗಲಾಟೆ ಕೇಸ್ ವಾಪಸ್ ಪಡೆದ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಿತ್ತು. ವೇದಿಕೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ದತ್ತಾತ್ರೇಯ ಪಾಟೀಲ್ ರೇವೂರ್, ಮಾಜಿ ಸಚಿವ ದಿ.ಖಮರುಲ್ ಇಸ್ಲಾಂ ಕಲಬುರಗಿಯನ್ನು ಮಿನಿ ಪಾಕಿಸ್ತಾನ ಮಾಡಲು ಮುಂದಾಗಿದ್ದರು. ಹಾಗಾಗಿಯೆ ಚುನಾವಣೆಯಲ್ಲಿ ಖಮರುಲ್ ಇಸ್ಲಾಂ ಸೋಲನ್ನ ಅನುಭವಿಸಿದ್ದರು ಎಂದು ಹೇಳಿದ್ದರು. ಈ ಸಂಬಂಧ ಮಾಜಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಗಾಳಿ – ವಿಚ್ಛೇದನಕ್ಕೆ ಮೊರೆ ಹೋದ ದಂಪತಿ










