ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನ ಬಿಜೆಪಿ ಸಂಸದ ರಾಜವೀರ್ ದಿಲೇರ್ (Hathras BJP MP Rajveer Diler) ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ವರದಿಗಳ ಪ್ರಕಾರ, ಸಂಸದರು ಅಲಿಘರ್‌ನಲ್ಲಿರುವ ತಮ್ಮ ನಿವಾಸದಲ್ಲಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಮೂರ್ಛೆ ಹೋಹಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸಂಬಂಧಿಕರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
Advertisement
हाथरस लोकसभा क्षेत्र से सांसद श्री राजवीर सिंह दिलेर जी का असामयिक निधन अत्यंत दुःखद एवं भाजपा परिवार के लिए अपूरणीय क्षति है।
मेरी संवेदनाएं शोक संतप्त परिजनों के साथ हैं।
प्रभु श्री राम से प्रार्थना है कि दिवंगत आत्मा को अपने श्री चरणों में स्थान तथा शोकाकुल परिजनों और उनके…
— Yogi Adityanath (मोदी का परिवार) (@myogiadityanath) April 24, 2024
Advertisement
ಯೋಗಿ ಸಂತಾಪ: ಬಿಜೆಪಿ ಸಂಸದರ ನಿಧನಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸಂತಾಪ ಸೂಚಿಸಿದ್ದಾರೆ. ಹತ್ರಾಸ್ ಲೋಕಸಭಾ ಕ್ಷೇತ್ರದ ಸಂಸದ ರಾಜವೀರ್ ಸಿಂಗ್ ದಿಲೇರ್ ಜಿ ಅವರ ಅಕಾಲಿಕ ನಿಧನವು ಬಿಜೆಪಿ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಅಗಲಿದ ಆತ್ಮಕ್ಕೆ ಶಾಂತಿ ಕೊಡಲಿ ಎಂದು ಭಗವಂತ ಶ್ರೀರಾಮನಲ್ಲಿ ಪ್ರಾರ್ಥನೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ತಮ್ಮ ಎಕ್ಸ್ ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Lok Sabha Election 2024: 14 ಕ್ಷೇತ್ರದಲ್ಲಿ 3 ದಿನ ಮದ್ಯ ಮಾರಾಟ ಬಂದ್
Advertisement
Advertisement
ರಾಜವೀರ್ ದಿಲೇರ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಬಿಜೆಪಿ ಟಿಕೆಟ್ ಕೊಡಲು ನಿರಾಕರಿಸಿತ್ತು. ಬದಲಾಗಿ ಅನುಪ್ ಪ್ರಧಾನ್ ಅವರನ್ನು ಕಣಕ್ಕಿಳಿಸಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ರಾಜ್ವಿರ್ ದಿಲೇರ್ 260,208 ಮತಗಳ ಅಂತರದಿಂದ ಗೆದ್ದಿದ್ದರು. ರಾಜ್‌ವೀರ್ ದಿಲೆರ್ 684,299 ಮತಗಳನ್ನು ಪಡೆದಿದ್ದು, ಸಮಾಜವಾದಿ ಪಕ್ಷದ ರಾಮ್‌ಜಿ ಲಾಲ್ ಸುಮನ್ ಅವರನ್ನು ಸೋಲಿಸಿದ್ದರು.