ನವದೆಹಲಿ: ಜುಲೈ 2 ರಂದು ಉತ್ತರ ಪ್ರದೇಶದ (Uttar Pradesh) ಹತ್ರಾಸ್‍ನಲ್ಲಿ 121 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣದ (Hathras Stampede) ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ದೆಹಲಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ.
ಪೊಲೀಸರಿಗೆ ಶರಣಾದ ಮಧುಕರ್ ಸತ್ಸಂಗದ ಮುಖ್ಯ ಸೇವಾದಾರನಾಗಿದ್ದ. ಈತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್‍ನ ಸಿಕಂದರಾ ರಾವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‍ಐಆರ್‍ನಲ್ಲಿ ಹೆಸರಿಸಲಾದ ಏಕೈಕ ಆರೋಪಿಯಾಗಿದ್ದಾನೆ. ಆತ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈ ವೇಳೆ ದೆಹಲಿಯ ಪೊಲೀಸರು, ಎಸ್‍ಐಟಿ ಮತ್ತು ಎಸ್‍ಟಿಎಫ್‍ಗೆ ಕರೆ ಮಾಡಿ ಶರಣಾಗಿದ್ದಾನೆ ಎಂದು ಆತನ ಪರ ವಕೀಲರು ವೀಡಿಯೋ ಸಂದೇಶದ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಜನತಾ ದರ್ಶನ – ಅಧಿಕಾರಿಗಳು ಗೈರು; ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ
Advertisement
Advertisement
ಮಧುಕರ್ ಯಾವುದೇ ತಪ್ಪು ಮಾಡದ ಕಾರಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲ. ಈ ಪ್ರಕರಣದಲ್ಲಿ ನಮ್ಮ ಅಪರಾಧವೇನು? ವಿಚಾರಣೆ ವೇಳೆ ಆತನಿಗಿರುವ ಹೃದಯ ಸಮಸ್ಯೆಯನ್ನು ಪೊಲೀಸರು ಪರಿಗಣನೆಗೆ ತೆಗೆದುಕೊಳ್ಳಬೇಕು. ಆತನಿಂದ ಏನು ತಪ್ಪಾಗಿಲ್ಲ ಎಂದು ಆರೋಪಿ ಪರ ವಕೀಲರು ಹೇಳಿಕೊಂಡಿದ್ದಾರೆ.
Advertisement
Advertisement
ಇದಕ್ಕೂ ಮುನ್ನ ಮಧುಕರ್ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು. ಇನ್ನೂ ಈ ಪ್ರಕರಣ ಸಂಬಂಧ ಗುರುವಾರ ಭೋಲೆ ಬಾಬಾನ (Bhole Baba) ಸತ್ಸಂಗದ ಸಂಘಟನಾ ಸಮಿತಿಯ ಸದಸ್ಯರಾಗಿದ್ದ ಇಬ್ಬರು ಮಹಿಳಾ ಸ್ವಯಂಸೇವಕರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಸ್ಪೈಸ್ ಜೆಟ್ ಏರ್‌ಲೈನ್ಸ್ ಎಡವಟ್ಟು- ಪ್ರಯಾಣಿಕರು 12 ಗಂಟೆ ವಿಮಾನದಲ್ಲೇ ಲಾಕ್