ನವದೆಹಲಿ: ಬಾಬ್ರಿ ಮಸೀದಿ ಧ್ವಂಸ, 2002ರ ಗುಜರಾತ್ ಗಲಭೆಗಳ (Gujarat Riots And Babri Masjid) ಬಗ್ಗೆ ಶಾಲೆಗಳಲ್ಲಿ ಬೋಧಿಸುವ ಅಗತ್ಯವಿರಲಿಲ್ಲ ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ (Dinesh Prasad Saklani) ಹೇಳಿದ್ದಾರೆ.
Advertisement
ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತಮಾಡಿದ ಅವರು, ನಾವು ನಮ್ಮ ವಿದ್ಯಾರ್ಥಿಗಳನ್ನು ಆಕ್ರಮಣಕಾರಿಗಳನ್ನಾಗಿ ಮಾಡಬೇಕೇ? ಸಮಾಜದಲ್ಲಿ ದ್ವೇಷ ಬಿತ್ತಬೇಕೆ? ದ್ವೇಷಕ್ಕೆ ಮಕ್ಕಳು ಬಲಿಯಾಗಬೇಕೇ? ಇದು ಶಿಕ್ಷಣದ ಉದ್ದೇಶವೇ? ಅಂತಹ ಚಿಕ್ಕ ಮಕ್ಕಳಿಗೆ ನಾವು ಗಲಭೆಗಳ ಬಗ್ಗೆ ಕಲಿಸಬೇಕೇ? ಪ್ರಶ್ನೆಗಳ ಮಳೆ ಸುರಿಸಿದರಲ್ಲದೇ ಪ್ರತಿ ವರ್ಷ ನಡೆಸುವ ಪರಿಷ್ಕರಣೆ ಭಾಗವಾಗಿ ಪಠ್ಯಪುಸ್ತಕಗಳಲ್ಲಿ ಬದಲಾವಣೆ ಮಾಡಲಾಗಿದ್ದು, ವಿವಾದ ಎಬ್ಬಿಸುವಂತಹ ವಿಷಯವೇ ಇದಲ್ಲ ಎಂದಿದ್ದಾರೆ.
Advertisement
Advertisement
ಎನ್‌ಸಿಇಆರ್‌ಟಿ 12ನೇ ತರಗತಿ ರಾಜ್ಯಶಾಸ್ತ್ರ ಪುಸ್ತಕದಲ್ಲಿ ಅಯೋಧ್ಯೆ ಪಠ್ಯ ವಿಭಾಗವನ್ನು 2 ಪುಟಗಳಿಗೆ ಇಳಿಸಲಾಗಿದೆ. ಗಲಭೆಗಳ ಕುರಿತ ಬೋಧನೆಯು ಆವೇಶಭರಿತ ಮತ್ತು ಖಿನ್ನತೆಯಿಂದ ಬಳಲುವ ನಾಗರಿಕರನ್ನು ಸೃಷ್ಟಿಸುತ್ತದೆ. ಈ ಕಾರಣಕ್ಕಾಗಿಯೇ, ಗುಜರಾತ್ ಗಲಭೆಗಳು, ಬಾಬ್ರಿ ಮಸೀದಿ ಧ್ವಂಸ ಕುರಿತು ಶಾಲೆಗಳಲ್ಲಿ ಬೋಧಿಸುವ ಅಗತ್ಯ ಇಲ್ಲ. ವಿದ್ಯಾರ್ಥಿಗಳು ಬೆಳೆದು ದೊಡ್ಡವರಾದಾಗ ಅದರ ಬಗ್ಗೆ ಕಲಿಯಬಹುದು ಶಾಲೆಯ ಪಠ್ಯಪುಸ್ತಕಗಳು ಏಕೆ? ಅವರು ಬೆಳೆದಾಗ ಏನಾಯಿತು ಮತ್ತು ಏಕೆ ಸಂಭವಿಸಿತು ಎಂಬುದನ್ನು ಅವರು ಅರ್ಥಮಾಡಿಕೊಳ್ಳಲಿ ಎಂದು ಅವರು ಪ್ರತಿಪಾದಿಸಿದ್ದಾರೆ.
Advertisement
ಶಾಲಾ ಪಠ್ಯಕ್ರಮದಲ್ಲಿ ಕೇಸರಿಕರಣದ ಆರೋಪವನ್ನು ತಳ್ಳಿಹಾಕಿರುವ ಅವರು, ನಮ್ಮ ಶಿಕ್ಷಣದ ಉದ್ದೇಶ ಹಿಂಸಾತ್ಮಕ ಪ್ರವೃತ್ತಿಯ, ಖಿನ್ನತೆಗೆ ಒಳಗಾದ ನಾಗರಿಕರನ್ನು ಸೃಷ್ಟಿಸುವುದಲ್ಲ. ದ್ವೇಷ ಮತ್ತು ಹಿಂಸೆ ಬೋಧನೆಯ ವಿಷಯಗಳಲ್ಲ. ಅವು ನಮ್ಮ ಪಠ್ಯಪುಸ್ತಕಗಳ ಕೇಂದ್ರಬಿಂದುವಾಗಿರಬಾರದು ಎಂದು ಸಕ್ಲಾನಿ ಹೇಳಿದ್ದಾರೆ.