ಅಜಾಗರೂಕ ನಿರ್ಧಾರದ ಜವಾಬ್ದಾರಿಯನ್ನು ಎದುರಿಸಲು ನಿಮಗೆ ಗಟ್ಸ್ ಇದೆಯಾ?: ಮೋದಿಗೆ ಓವೈಸಿ ಟೀಕೆ

Public TV
1 Min Read
owaisi

ನವದೆಹಲಿ: ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿರುವ ಹಿನ್ನೆಲೆ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಟುವಾಗಿ ಟೀಕಿಸಿದ್ದಾರೆ. ನಿಮ್ಮ ಅಜಾಗರೂಕ ನಿರ್ಧಾರ ಹಾಗೂ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

army 3

ಈ ಬಗ್ಗೆ ಟ್ವೀಟ್ ಮಾಡಿರುವ ಓವೈಸಿ, ದಯವಿಟ್ಟು ಮಿಲಿಟರಿ ಮುಖ್ಯಸ್ಥರು ಮೋದಿಯವರ ಹಿಂದೆ ಅಡಗಿಕೊಳ್ಳುವುದನ್ನು ನಿಲ್ಲಿಸಿ. ನಿಮ್ಮ ಅಜಾಗರೂಕ ನಿರ್ಧಾರದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹಾಗೂ ಪರಿಣಾಮಗಳನ್ನು ಎದುರಿಸಲು ನಿಮ್ಮಲ್ಲಿ ಗಟ್ಸ್(ಧೈರ್ಯ) ಇದೆಯಾ? ದೇಶದ ಯುವಕರ ಭವಿಷ್ಯದ ಬಗೆಗಿನ ಆಕ್ರೋಶ ಕೇವಲ ನಿಮ್ಮನ್ನೇ ಗುರಿಯಾಗಿಸಿಕೊಂಡಿದೆ ಎಂದು ವಾದಿಸಿದ್ದಾರೆ. ಇದನ್ನೂ ಓದಿ: ಇಂಡಿಯನ್ ಆರ್ಮಿ ವಿಶ್ವದಲ್ಲೇ ಫೈನೆಸ್ಟ್ ಆರ್ಮಿ, ಇದಕ್ಕೆ ಡಿಸ್ಟರ್ಬ್ ಮಾಡ್ಬೇಡಿ: ನಿವೃತ್ತ ಸೇನಾಧಿಕಾರಿ ಎಚ್ಚರಿಕೆ

ಅಗ್ನಿಪಥ್ ಯೋಜನೆಯನ್ನು ಸರ್ಕಾರ ಹಿಂಪಡೆಯಬೇಕು ಎಂದು ಜನರು ಒತ್ತಾಯಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಹೈದರಾಬಾದ್‌ನ ಸಿಕಂದರಾಬಾದ್‌ನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ರೈಲುಗಳಿಗೆ ಬೆಂಕಿ ಹಚ್ಚುವುದರ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇಲ್ಲಿಯವರೆಗೆ 300ಕ್ಕೂ ಹೆಚ್ಚು ರೈಲುಗಳು ಸ್ಥಗಿತಗೊಂಡಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ದೇಶದಲ್ಲಿ ಅಗ್ನಿಪಥ್ ಪ್ರತಿಭಟನೆಯ ಕಾವು- ಉತ್ತರದ ಬಳಿಕ ದಕ್ಷಿಣದಲ್ಲಿ ಹಿಂಸಾತ್ಮಕ ಪ್ರೊಟೆಸ್ಟ್

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಯುವ ಸೈನಿಕರಿಗಾಗಿ 4 ವರ್ಷಗಳ ಕಾಲಾವಧಿಗೆ ಸೀಮಿತವಾಗಿದ್ದು, ಸೇನೆ, ನೌಕಾಪಡೆ ಹಾಗೂ ವಾಯುಪಡೆಗಳಲ್ಲಿ ನೇಮಿಸಿಕೊಳ್ಳುವ ಯೋಜನೆಯಾಗಿದೆ.

Live Tv

Share This Article