ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಟಾಪ್ ಹೋಟೆಲ್‍ಗಳಿಂದ 10 ವಿವಿಧ ರೀತಿಯ ದೋಸೆಗಳನ್ನು ಕಾಂಗ್ರೆಸ್ ಕಾರ್ಯಕರ್ತರು ನನಗೆ ಕಳುಹಿಸಿದ್ದಾರೆ. ಆದರೆ ಇಲ್ಲಿಯವರೆಗೂ ನನಗೆ ಯಾವುದೇ ದೋಸೆ ಪಾರ್ಸೆಲ್ ಬಂದಿಲ್ಲ ಎಂದು ಹೇಳುವ ಮೂಲಕ ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Advertisement
ನಗರದಲ್ಲಿ ಮಳೆಹಾನಿಯಿಂದಾಗಿ ಜನ ಪರದಾಡುತ್ತಿದ್ದ ಸಂದರ್ಭದಲ್ಲಿ ಸಂಸದ ತೇಜಸ್ವಿಸೂರ್ಯ ದೋಸೆ ಸವಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರಿಂದ ತೇಜಸ್ವಿ ಸೂರ್ಯ ಸಾಕಷ್ಟು ಟ್ರೋಲ್‍ಗೆ ಒಳಗಾಗಿದ್ದರು. ಈ ಮಧ್ಯೆ ಕಾಂಗ್ರೆಸ್ ಪಕ್ಷವು ಬೆಂಗಳೂರಿನಲ್ಲಿ ಮಳೆ ಹಾನಿಯಿಂದ ಜನರ ಪರದಾಡುತ್ತಿದ್ದರೆ ಸಂಸದರು ಹೋಟೆಲ್‍ನಲ್ಲಿ ದೋಸೆ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ. ಇದು ಇವರ ಬೇಜವಾಬ್ದಾರಿ ತನವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿತ್ತು. ಇದನ್ನೂ ಓದಿ: ಮಿಸ್ಸಿಂಗ್ ಮಿನಿಸ್ಟರ್ಸ್ – ಬೆಂಗಳೂರು ಮಂತ್ರಿ, ಸಂಸದರ ವಿರುದ್ಧ ಕಾಂಗ್ರೆಸ್ ಕಿಡಿ
Advertisement
ಸಂಸದ @Tejasvi_Surya ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ!
ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ.
ಕೆಲಸಕ್ಕೆ ಕರೆಯಬೇಡಿ, ದೋಸೆ ತಿನ್ನೋಕೆ ಕರೆಯೋದು ಮರೆಯಬೇಡಿ ಎಂಬುದು ಇವರ ಮನವಿ!#MissingMinisters#BJPBrashtotsava pic.twitter.com/gSoJ4eDK5s
— Karnataka Congress (@INCKarnataka) September 7, 2022
Advertisement
ಇದೀಗ ಈ ಕುರಿತಂತೆ ತೇಜಸ್ವಿ ಸೂರ್ಯ ಅವರು ತಮ್ಮ ಟ್ವಿಟ್ಟರ್‌ನಲ್ಲಿ ದೋಸೆ ತಿನ್ನುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ನನ್ನ ಮನೆಗೆ ಮಸಾಲೆ ದೋಸೆ ಪಾರ್ಸೆಲ್ ಕಳುಹಿಸಿದ್ದಾರೆ. ಆದರೆ 24 ಗಂಟೆಗಿಂತಲೂ ಹೆಚ್ಚು ಕಾಲ ಕಳೆದಿದೆ. ಇನ್ನೂ ದೋಸೆ ಬಂದಿಲ್ಲ. ಇದರಲ್ಲಿಯೂ ಮೋಸ ಮಾಡಿದ್ದಾರೆ. ದೋಸೆಯನ್ನು ಸರಿಯಾಗಿ ಕಳುಹಿಸಲು ಕೂಡ ಅವರಿಗೆ ಸಾಧ್ಯವಾಗಲಿಲ್ಲ. ಇವರು ಆಡಳಿತವನ್ನು ನಡೆಸುವ ಕನಸು ಕಾಣುತ್ತಿದ್ದಾರೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಳ್ಳುವ ಮೂಲಕ ವ್ಯಂಗ್ಯವಾಡಿದ್ದಾರೆ.
Advertisement
ತೇಜಸ್ವಿ ಸೂರ್ಯ ಅವರು ಮಸಾಲೆ ದೋಸೆ ತಿನ್ನುತ್ತಿರುವ ವೀಡಿಯೋವನ್ನು ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಹಂಚಿಕೊಂಡಿದ್ದರು. ಇದೇ ವೇಳೆ ನಗರದ ಬಹುತೇಕ ಭಾಗಗಳು ಪ್ರವಾಹದಲ್ಲಿ ಜಲಾವೃತಗೊಂಡಿದ್ದ ವೀಡಿಯೊವನ್ನು ಹಂಚಿಕೊಂಡಿದ್ದರು. ಇದನ್ನೂ ಓದಿ: ತೇಜಸ್ವಿ ಸೂರ್ಯ ದೋಸೆ ಸವಿದಿದ್ದನ್ನು ಟೀಕಿಸಿದ್ದ ಕಾಂಗ್ರೆಸ್‍ಗೆ ಬಿಜೆಪಿ ತಿರುಗೇಟು
ಇದರ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದರು, ನನ್ನ ಕ್ಷೇತ್ರದಲ್ಲಿ ಬೊಮ್ಮನಹಳ್ಳಿಯಲ್ಲಿ ಮಾತ್ರ ಸ್ವಲ್ಪ ಮಳೆ ಸಮಸ್ಯೆ ಆಗಿದೆ ಬೇರೆ ಕ್ಷೇತ್ರದಲ್ಲಿ ಜನ ಜೀವನ ಯಥಾಸ್ಥಿತಿ ನಡೆದುಕೊಂಡು ಬರುತ್ತಿದೆ. ನಾನು ನನ್ನ ಕ್ಷೇತ್ರದಲ್ಲಿ ದೋಸೆ ಅಂಗಡಿ ಉದ್ಘಾಟನೆ ಮಾಡಿದೆ. ನನ್ನ ಕ್ಷೇತ್ರದಲ್ಲಿ ಇರುವ ಅಂಗಡಿ ಉದ್ಘಾಟನೆ ನನ್ನ ಕರ್ತವ್ಯ, ಅದನ್ನು ನಿರ್ವಹಣೆ ಮಾಡಿರುವುದಾಗಿ ತಿಳಿಸಿದ್ದರು.