ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ (Bus Accident) ಪರಿಣಾಮ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡು, ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ (Haveri) ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
18 ವರ್ಷದ ಬಾವರಸಿಂಗ್ ರಜಪೂತ್ ಮೃತ ಪ್ರಯಾಣಿಕ. ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಿದ್ರೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಇದನ್ನೂ ಓದಿ: ಬಿಜೆಪಿಯನ್ನು ಮೆಚ್ಚಿಸುವಂತಹ ಹೇಳಿಕೆಗಳನ್ನು ನೀಡಬೇಡಿ: ತರೂರ್‌ಗೆ ವೇಣುಗೋಪಾಲ್‌ಎಚ್ಚರಿಕೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಾವೇರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಪಲ್ಟಿಯಾಗಿದ್ದ ಖಾಸಗಿ ಬಸ್‌ನ್ನು ಸ್ಥಳದಿಂದ ಬೇರೆಡೆಗೆ ಸ್ಥಳಾಂತರಿಸಿದ್ದಾರೆ.
ಈ ಘಟನೆ ಹಾವೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ನಾಪತ್ತೆ – ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್ ಪಾಯಿಂಟ್ ಸರ್ಚ್!



