LatestDistrictsHaveriKarnataka

ನಡುರಸ್ತೆಯಲ್ಲೇ ಸುಟ್ಟು ಕರಕಲಾದ ಕಾರ್

ಹಾವೇರಿ: ನಡುರಸ್ತೆಯಲ್ಲೇ ಕಾರೊಂದು ಸುಟ್ಟು ಕರಕಲಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬಿಂಗಾಪುರ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಆದರೆ ಕಾರು ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ತಾಂತ್ರಿಕ ದೋಷ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆಡೂರು ಠಾಣೆ ಪೊಲೀಸರು ಈ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

hvr car

ತನಿಖೆ ನಂತರ ಕಾರ್ ಯಾರಿಗೆ ಸೇರಿದ್ದು ಮತ್ತು ಕಾರಿಗೆ ಹೇಗೆ ಬೆಂಕಿ ಹೊತ್ತಿಕೊಂಡಿದೆ ಅನ್ನೋ ಮಾಹಿತಿ ಗೊತ್ತಾಗಬೇಕಿದೆ.

Related Articles

Leave a Reply

Your email address will not be published. Required fields are marked *