ಹಾವೇರಿ: ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ರೆಸಾರ್ಟ್ ರಾಜಕೀಯ ಇದೀಗ ಗ್ರಾಮ ಪಂಚಾಯಿತಿಗೂ (Gram Panchayat) ಕಾಲಿಟ್ಟಿದ್ದು, ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮ ಪಂಚಾಯತಿ ಸದಸ್ಯರು 40 ದಿನಗಳ ಕಾಲ ಬೆಂಗಳೂರಿನ (Bengaluru) ರೆಸಾರ್ಟ್‍ನಲ್ಲಿ ಇದ್ದರು ಎಂಬ ವಿಷಯ ಇದೀಗ ಬೆಳಕಿಗೆ ಬಂದಿದೆ.
ಹಾವೇರಿ (Haveri) ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮ ಪಂಚಾಯಿತಿಯು ಒಟ್ಟು 13 ಸದಸ್ಯರನ್ನು ಒಳಗೊಂಡಿದೆ. ಆ ಪಂಚಾಯಿತಿಗೆ ಮಾಲತೇಶ್ ದುರಗಪ್ಪ ನಾಯರ್ ಹಾಲಿ ಅಧ್ಯಕ್ಷರಾಗಿದ್ದಾರೆ. ಆದರೆ ಅಧಿಕಾರ ಸ್ವೀಕರಿಸುವ ವೇಳೆಯಲ್ಲಿ ಮಾಲತೇಶ್ ಅಧ್ಯಕ್ಷರ ಆಡಳಿತಾವಧಿ ವಿಚಾರದಲ್ಲಿ ನಡೆದ ಒಪ್ಪಂದದಂತೆ 15 ತಿಂಗಳು ಅಧಿಕಾರ ನಡೆಸುವುದಾಗಿ ತಿಳಿಸಿದ್ದರು. ನಂತರ ಆ ಸ್ಥಾನವನ್ನು ಬಿಟ್ಟುಕೊಡುವುದಾಗಿಯೂ ತಿಳಿಸಿದ್ದರು. ಆದರೆ ಮಾಲತೇಶ್ 15 ತಿಂಗಳ ನಂತರ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡದೆ ಸತಾಯಿಸುತ್ತಿದ್ದ. ಹೀಗಾಗಿ ಗ್ರಾ.ಪಂ ಅಧ್ಯಕ್ಷ ಮಾಲತೇಶ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸದಸ್ಯರು ನಿರ್ಧರಿಸಿದ್ದಾರೆ.
Advertisement
Advertisement
ಒಟ್ಟು 13 ಜನ ಗ್ರಾ.ಪಂ ಸದಸ್ಯರಲ್ಲಿ 9 ಸದಸ್ಯರು ಸಂತೋಷ್ ಭಟ್ ಗುರೂಜಿ ಬಣದವರು, ಇನ್ನುಳಿದ ನಾಲ್ವರು ಬಿಜೆಪಿ ಸದಸ್ಯರಾಗಿದ್ದರು. ಗ್ರಾ.ಪಂ ಅಧ್ಯಕ್ಷ ಮಾಲತೇಶ್ ಮಾತಿಗೆ ತಪ್ಪಿದ ಕಾರಣ ಅವಿಶ್ವಾಸ ನಿರ್ಣಯಕ್ಕೆ ನಿರ್ಧಾರ ಮಾಡಲಾಗಿತ್ತು. ಆದರೆ ಮಾಲತೇಶ್ ಗ್ರಾ.ಪಂ ಸದಸ್ಯರನ್ನು ಹೈಜಾಕ್ ಮಾಡಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಸಂತೋಷ್ ಭಟ್ ಗುರೂಜಿ ಅವರು ಗ್ರಾ.ಪಂ ಸದಸ್ಯರನ್ನು ಬೆಂಗಳೂರಿನ ರೆಸಾರ್ಟ್‍ಗೆ ಕಳಿಸಿಕೊಟ್ಟಿದ್ದರು. ಸುಮಾರು 40 ದಿನಗಳ ಕಾಲ ಅದೇ ರೆಸಾರ್ಟ್‍ನಲ್ಲೇ ಗ್ರಾಪಂ ಸದಸ್ಯರು ತಂಗಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ
Advertisement
Advertisement
ಇಂದು ಬೆಂಗಳೂರಿನಿಂದ ವಿಮಾನದಲ್ಲಿ ಬಂದು ಅವಿಶ್ವಾಸ ನಿರ್ಣಯ ಮಂಡನೆ ಪ್ರಕ್ರಿಯೆಯಲ್ಲಿ ಗ್ರಾ.ಪಂ ಸದಸ್ಯರು ಭಾಗಿಯಾದ್ದಾರೆ. ತಾಲೂಕು ಉಪ ವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ ಅವಿಶ್ವಾಸ ನಿರ್ಣಯ ಮಂಡನೆ ಪ್ರಕ್ರಿಯೆ ನಡೆಸಿದ್ದಾರೆ. ಒಟ್ಟಾರೆಯಾಗಿ ಆಪರೇಶನ್ ಕಮಲದ ಮಾದರಿಯಲ್ಲೇ ಆಪರೇಶನ್ ಗ್ರಾಮ ಪಂಚಾಯಿತಿ ಆಗಿದೆ. ಇದನ್ನೂ ಓದಿ: ಮರ್ಯಾದೆ ಉಳಿಸಿಕೊಳ್ಳೋಕೆ ಸಿದ್ದರಾಮಯ್ಯ ಯಾವ ಕ್ಷೇತ್ರ ಕೊಟ್ರೂ ಓಕೆ ಅಂತಾರೆ – ಈಶ್ವರಪ್ಪ