ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಐವರು ಗಾಯಗೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆಯ ರಾಣೇಬೆನ್ನೂರಿನ (Ranebennur) ಹೊರವಲಯದಲ್ಲಿರುವ 48ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಇದನ್ನೂ ಓದಿ: ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷ ಪ್ರಿಯಾಗೆ ಮರಣದಂಡನೆ ರದ್ದು?
ಖಾಸಗಿ ಬಸ್ ಪುಣೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 13 ಜನರ ಪೈಕಿ 5 ಜನರು ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳನ್ನು ರಾಣೇಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾಣೇಬೆನ್ನೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಜಗದೀಪ್ ಧನಕರ್ ರಾಜೀನಾಮೆ ಸುತ್ತ ಅನುಮಾನದ ಹುತ್ತ- ದಿಢೀರ್ ರಿಸೈನ್ ಮಾಡಿದ್ದು ಯಾಕೆ?