ಹಾವೇರಿ: ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ಕಲ್ಪಿಸುವಂತೆ ಆಗ್ರಹಿಸಿ ಬೆಂಗಳೂರಿನ ಹೂಡಿ ಗ್ರಾಮದಿಂದ ಬೆಳಗಾವಿಯ ಸುವರ್ಣ ಸೌಧವರೆಗೂ ಪಾದಯಾತ್ರೆ ಪ್ರಾರಂಭವಾಗಿದ್ದು, ಇಂದು ಹಾವೇರಿ ಜಿಲ್ಲೆಗೆ ಬಂದು ತಲುಪಿದೆ.
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ವೇದಿಕೆಯ ಕಾರ್ಯಕರ್ತರು ಪಾದಯಾತ್ರೆ ನಡೆಸಿದ್ದಾರೆ. ಹಾವೇರಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಜೈ ಘೋಷಣೆ ಹಾಕಿ, 20ಕ್ಕೂ ಅಧಿಕ ಕಾರ್ಯಕರ್ತರು ಬೆಳಗಾವಿ ಕಡೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಿಂದ ಬೆಳಗಾವಿ ಸುವರ್ಣ ಸೌಧದವರೆಗೂ ಸುಮಾರು 520 ಕಿ.ಲೋ ಮೀಟರ್ ಪಾದಯಾತ್ರೆ ನಡೆಸಲಿದ್ದಾರೆ.
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ಕರ್ನಾಟಕದಲ್ಲಿ ಖಾಸಗಿ ಸಂಸ್ಥೆ ಮತ್ತು ಐಟಿಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ 80 ಪರ್ಸೆಂಟ್ ಉದ್ಯೋಗ ಕಲ್ಪಿಸಲು ಡಾಕ್ಟರ್ ಸರೋಜಿನಿ ಮಹಿಷಿರವರ ವರದಿ ಅದಷ್ಟು ಬೇಗ ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿದರು. ಡಾಕ್ಟರ್ ಸರೋಜಿನಿ ಮಹಿಷಿ ವರದಿ ಜಾರಿಗೆ ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವ ಎಚ್ಚರಿಕೆ ಹಾಕಿದ್ರು.