ಹಾವೇರಿ: ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ತೀರ ಕಡಿಮೆ ಇದ್ದರೂ, ಕಳೆದ ನಾಲ್ಕು ತಿಂಗಳಿನಿಂದ ಡೇತ್ ರೇಟ್ ಮಾತ್ರ ಕಡಿಮೆಯಾಗಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣದಲ್ಲಿ ನಂಬರ್ 1 ಸ್ಥಾನ ಕಾಯ್ದುಕೊಂಡಿದೆ. ಪ್ರಸ್ತುತ ಡೇತ್ ರೇಟ್ ಶೇ.2.92 ಇದ್ದು, ಸೋಂಕಿನ ಪ್ರಮಾಣ ಕಡಿಮೆ ಆಗಿದೆ.

ವೈದ್ಯರು ನಿರಂತರವಾಗಿ ಕೆಲಸ ಮಾಡಿದ್ದು, ಸರಿಯಾದ ಸಮಯಕ್ಕೆ ರೋಗಿಗಳು ಆಸ್ಪತ್ರೆಗೆ ಬಾರದೇ ಇರುವ ಕಾರಣ ಹಾಗೂ ಆಕ್ಸಿಜನ್ ಸಮಸ್ಯೆಯಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ತಜ್ಞರ ಸಮಿತಿ ವರದಿ ಸಲ್ಲಿಸಿದೆ. ಇದನ್ನೂ ಓದಿ:ರೋಹಿಣಿ ಸಿಂಧೂರಿ ವಿರುದ್ಧ ಭ್ರಷ್ಟಾಚಾರ ಆರೋಪ – ಚರ್ಚೆಗೆ ಆಗ್ರಹಿಸಿ ಸಾರಾ ಮಹೇಶ್ ಪ್ರತಿಭಟನೆ
ಇದುವರೆಗೂ ವರದಿ ಕುರಿತು ನಿರ್ಲಕ್ಷ್ಯ ತೋರಿದವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸದ್ಯ ಡೇತ್ ರೇಟ್ ಶೇ.2.92 ಇದೆ. ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಸದ್ಯ ಸಾವಿನ ಪ್ರಮಾಣ ಕಡಿಮೆ ಇದೆ. ಹಿಂದೆ ಅವಧಿಯಲ್ಲಿ ಹೆಚ್ಚು ಸಾವಿನ ಪ್ರಮಾಣವಾಗಿತ್ತು. ಸದ್ಯ ಹಾವೇರಿ ಜಿಲ್ಲೆ ಸಂಖ್ಯೆ ಲೆಕ್ಕಾಚಾರ ಪ್ರಕಾರ ನಂಬರ್ 1 ಇದೆ. ಮೂರನೇ ಅಲೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಆಕ್ಸಿಜನ್ ಘಟಕ ಹಾಗೂ ವೈದ್ಯರ ನೇಮಕ ಮಾಡಿಕೊಂಡಿದ್ದೇವೆ. ಈಗ ಯಾವುದೇ ಸಾವಿನ ಪ್ರಮಾಣ ಹೆಚ್ಚಿಲ್ಲ. ಸೋಂಕಿನ ಪ್ರಮಾಣದ ಸಹ ಕಡಿಮೆ ಆಗಿದೆ ಎಂದು ತಿಳಿಸಿದ್ದಾರೆ.



