– ಗೌರವ ಧನ, ಮೊಟ್ಟೆ ಬಾಕಿ ಪಾವತಿಸದಿದ್ದರೆ ಅಂಗನವಾಡಿ ಬಂದ್
ಹಾವೇರಿ: ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಅಂಗನವಾಡಿ (Anganwadi) ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ವೇತನವೇ ಪಾವತಿಯಾಗಿಲ್ಲ. ಸರ್ಕಾರ ಸುಮಾರು 1.30 ಕೋಟಿ ರೂ. ಮೊಟ್ಟೆ ಖರೀದಿ ಬಾಕಿ ಹಣ ಉಳಿಸಿಕೊಂಡಿದೆ. ಇತ್ತ ಮೊಟ್ಟೆ ಖರೀದಿ ಮಾಡಿದ ಬಾಕಿಯನ್ನೂ ಸರ್ಕಾರ ಕೊಡದೇ ಸತಾಯಿಸುತ್ತಿದೆ. ಇದರಿಂದ ಅಂಗನವಾಡಿ ಕಾರ್ಯಕರ್ತೆಯರು ಹೈರಾಣಾಗಿ ಹೋಗಿದ್ದಾರೆ.
Advertisement
ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿದೆ. ಕೊಡುವ ಅಲ್ಪ ವೇತನವೂ ಬಾರದೇ ಕಾರ್ಯಕರ್ತೆಯರು, ಸಹಾಯಕರು ಹೈರಾಣಾಗಿದ್ದಾರೆ. ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ವೃದ್ಧರ ಆರೈಕೆ ಮುಂತಾದವುಗಳ ನಿರ್ವಹಣೆಗೆ ಇದೇ ವೇತನ ನಂಬಿಕೊಂಡಿರುವ ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ವಿಳಂಬ ನೀತಿಯಿಂದ ನಲುಗಿ ಹೋಗಿದ್ದಾರೆ. ಹಾವೇರಿ ಜಿಲ್ಲೆಯಲ್ಲೂ ಇದೇ ಪರಿಸ್ಥಿತಿ ಎದುರಾಗಿದೆ. ಗೌರವ ಧನ, ಮೊಟ್ಟೆ ಬಾಕಿ ಪಾವತಿಸದಿದ್ದರೆ ಅಂಗನವಾಡಿ ಬಂದ್ ಎಚ್ಚರಿಕೆ ನೀಡಲಾಗಿದೆ. ಮಕ್ಕಳಿಗೆ ಮೊಟ್ಟೆ ವಿತರಣೆ ಸ್ಥಗಿತಗೊಳಿಸಬೇಕಾಗುತ್ತೆ ಎಂದು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಫೆಡರೇಶನ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕೆಲವೇ ದಿನಗಳಲ್ಲಿ ಕೆಲವು ರಾಜಕೀಯ ಮುಖಂಡರು ಲೈನ್‌ನಲ್ಲಿ ನಿಲ್ಲುವ ಕಾಲ ಬರುತ್ತೆ – ಸಿಎಂ ವಿರುದ್ಧ ರೇವಣ್ಣ ಕಿಡಿ
Advertisement
Advertisement
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ (Lakshmi Hebbalkar) ಪತ್ರ ಬರೆದ ಎಐಟಿಯುಸಿ, ಅಂಗನವಾಡಿ ಬಂದ್‌ಗೆ ಎಚ್ಚರಿಕೆ ನೀಡಿದೆ. ಅ.5 ರಂದೇ ಪತ್ರ ಬರೆಯಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನವೂ ಇಲ್ಲ, ಮೊಟ್ಟೆ ಹಣ ಬಾಕಿನೂ ಪಾವತಿಸಿಲ್ಲ. ಅಂಗನವಾಡಿ ಕಾರ್ಯಕರ್ತೆಯರಿಗೆ 2 ತಿಂಗಳಿಂದ ಮೊಟ್ಟೆ ಹಣವನ್ನೇ ನೀಡಿಲ್ಲ. ಸರ್ಕಾರ ಅನುದಾನದ ಕೊರತೆ ಹಿನ್ನೆಲೆಯಲ್ಲಿ 2 ತಿಂಗಳಿಂದ ಮೊಟ್ಟೆ ಹಣ ನೀಡಲಿಲ್ಲ. ಸ್ವಂತ ಹಣದಲ್ಲಿ ಮೊಟ್ಟೆ ಖರೀದಿಸಿ ಮಕ್ಕಳು, ಗರ್ಭಿಣಿ ಬಾಣಂತಿಯರಿಗೆ ನೀಡಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ವಿನಯ್ ಕುಲಕರ್ಣಿ ವರ್ಚಸ್ಸಿಗೆ ಧಕ್ಕೆ ತರುವ ಹುನ್ನಾರ ನಡೆದಿದೆ: ಏಗನಗೌಡರ
Advertisement
ಹಾವೇರಿ ಜಿಲ್ಲೆಯಲ್ಲಿ 1.55 ಲಕ್ಷ ಫಲಾನುಭವಿಗಳಿದ್ದಾರೆ. 3 ರಿಂದ 6 ವರ್ಷದ ಮಕ್ಕಳು, ಗರ್ಭಿಣಿ ಮಹಿಳೆಯರು, ಬಾಣಂತಿಯರು ಸೇರಿ 1.55 ಲಕ್ಷ ಫಲಾನುಭವಿಗಳಿದ್ದಾರೆ. ತಿಂಗಳಿಗೆ ಮೊಟ್ಟೆ ಖರೀದಿಸಲು ಸುಮಾರು 66 ಲಕ್ಷ ರೂ ಅನುದಾನ ಬೇಕು. ಈಗ 2 ತಿಂಗಳಿಂದ ಮೊಟ್ಟೆ ಬಾಕಿ ಬಂದೇ ಇಲ್ಲ. ಹಾವೇರಿ ಜಿಲ್ಲೆಯಲ್ಲೇ ಸುಮಾರು 1.30 ಕೋಟಿ ರೂ. ಮೌಲ್ಯದ ಮೊಟ್ಟೆ ಖರೀದಿ ಬಾಕಿ ನೀಡಬೇಕಿದೆ. ಸರ್ಕಾರ ಕೂಡಲೇ ಬಿಡಗಡೆ ಮಾಡಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: Valmiki Scam | ನಾಗೇಂದ್ರಗೆ ಬಿಗ್ ರಿಲೀಫ್ – ಜಾಮೀನು ಮಂಜೂರು
ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರಿಗೆ ಗೌರವ ಧನವೂ ಸಿಗಲಿಲ್ಲ. ಹಾವೇರಿ ಜಿಲ್ಲೆಯಲ್ಲಿ 1921 ಅಂಗನವಾಡಿ ಕಾರ್ಯಕರ್ತೆಯರಿದ್ದಾರೆ. 1835 ಅಂಗನವಾಡಿ ಸಹಾಯಕರಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ತಿಂಗಳಿಗೆ 11,500 ರೂ. ಗೌರವ ಧನ ನೀಡಲಾಗ್ತಿದೆ. ಅಂಗನವಾಡಿ ಸಹಾಯಕಿಯರಿಗೆ ತಿಂಗಳಿಗೆ 5000 ರೂ. ಗೌರವ ಧನ ನೀಡಲಾಗುತ್ತಿದೆ. ಮೂರು ತಿಂಗಳ ಗೌರವ ಧನ ಬಾಕಿ ಇದೆ. ಸರ್ಕಾರದ ಗಮನಕ್ಕೆ ತರಲಾಗಿದೆ. ಕೂಡಲೇ ಒಂದು ವಾರದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಯ ಉಪನಿರ್ದೇಶಕರು ಹೇಳಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ದೆಹಲಿ ಸಿಎಂ ಅತಿಶಿ