Connect with us

Districts

ಭಾರತೀಯ ವಿಜ್ಞಾನ ಸಮ್ಮೇಳನಕ್ಕೆ ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳು ಆಯ್ಕೆ

Published

on

ಹಾವೇರಿ: ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ಯಲ್ಲಿ ಜನವರಿ 3ರಿಂದ 7ರವರೆಗೆ ನಡೆಯುವ 107ನೇ ಭಾರತೀಯ ವಿಜ್ಞಾನ ಸಮ್ಮೇಳನಕ್ಕೆ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಹಾವೇರಿ ತಾಲೂಕಿನ ಶ್ರೀ ಶಿವಶರಣ ಹರಳಯ್ಯನವರ ಪ್ರೌಢಶಾಲೆಯ ವಿದ್ಯಾರ್ಥಿನಿ ಸುಮಾ ಹರಿಜನ್ ಹಾಗೂ ಹಾವೇರಿ ನಗರದ ಗೆಳೆಯರಬಳಗ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾಥಿ ಯಶವಂತ ಬಂಕಾಪುರ 107ನೇ ಭಾರತೀಯ ವಿಜ್ಞಾನ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ. ಸುಮಾ ಹರಿಜನ್ ನೀರನ್ನ ಇಂಗಿಸಿಕೊಳ್ಳಿ, ಆರೋಗ್ಯ ಸಂರಕ್ಷಿಸಿಕೊಳ್ಳಿ ಎಂಬ ವಿಷಯ ಮಂಡಿಸಲಿದ್ದಾರೆ. ವಿದ್ಯಾರ್ಥಿ ಯಶವಂತ ಬಂಕಾಪುರ ಪರಿಸರಪ್ರೇಮಿ ಕೀಟನಾಶಕ ಎಂಬ ವಿಷಯವನ್ನ ಮಂಡನೆ ಮಾಡಲಿದ್ದಾರೆ. ಈ ವಿದ್ಯಾರ್ಥಿಗಳ ಮಾರ್ಗದರ್ಶಿ ಶಿಕ್ಷಕರಾದ ಶ್ರೀ.ಜಿ.ಎಸ್.ಹತ್ತಿಮತ್ತೂರ ಅವರು ಕೂಡ ಭಾರತೀಯ ವಿಜ್ಞಾನ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ವಿದ್ಯಾರ್ಥಿಗಳನ್ನು ಹಾಗೂ ಶ್ರೀ.ಜಿ.ಎಸ್.ಹತ್ತಿಮತ್ತೂರ ಅವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಅಂದಾನಪ್ಪ ವಡಗೇರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಜಿ.ಎಂ.ಬಸವಲಿಂಗಪ್ಪ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ್ ಶುಭ ಹಾರೈಸಿದ್ದಾರೆ.