500 ರೂ. ಕಳ್ಕೊಂಡು, ವಿದ್ಯಾರ್ಥಿಗಳನ್ನ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ

Public TV
1 Min Read
hvr students

-ಕೊಠಡಿಯೊಳಗೆ ಕೂಡಿ ಹಾಕಿ ಥಳಿತ

ಹಾವೇರಿ: 500 ರುಪಾಯಿ ಹಣ ಕಳೆದುಕೊಂಡ ಶಿಕ್ಷಕರೊಬ್ಬರು ಅದನ್ನು ಮಕ್ಕಳೇ ಕದ್ದಿದ್ದಾರೆ ಎಂದು ಆರೋಪಿಸಿ, ಬಾಸುಂಡೆ ಬರುವಂತೆ ವಿದ್ಯಾರ್ಥಿಗಳಿಗೆ ಥಳಿಸಿದ ಅಮಾನವೀಯ ಘಟನೆ ಹಾವೇರಿ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹನುಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಒಟ್ಟು 8 ಮಂದಿ ವಿದ್ಯಾರ್ಥಿಗಳನ್ನು ಶಾಲಾ ಕೊಠಡಿಯೊಳಗೆ ಕೂಡಿ ಹಾಕಿ ಶಿಕ್ಷಕ ಕುಮಾರಸ್ವಾಮಿ ಹಿರೇಮಠ ಬಾಸುಂಡೆ ಬರುವಂತೆ ಹೊಡೆದಿದ್ದಾರೆ. ಶಾಲೆಯ ಪಕ್ಕದಲ್ಲಿಯೇ ಸಿಗುವ ಹಸಿ ಕಟ್ಟಿಗೆ ತುಂಡಾಗುವಂತೆ ಮಕ್ಕಳ ಮುಖ, ಕೈ ಹಾಗೂ ಬೆನ್ನಿಗೆ ಮನಸೋಯಿಚ್ಛೆ ಶಿಕ್ಷಕ ಥಳಿಸಿದ್ದಾರೆ.

hvr students 1

ಈ ವಿಷಯ ತಿಳಿದ ವಿದ್ಯಾರ್ಥಿಗಳ ಪೋಷಕರು ಶಿಕ್ಷಕ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರು ಸಭೆ ನಡೆಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *