ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದೆ. ಸಿದ್ದಾರ್ಥ (27), ಹಸನ್ಮುಖಿ (29), ಯಶೋಧಾ ಬಾಯಿ (51) ಮೃತರು. ಸೌಂದರ್ಯ, ಸಿಂಧು, ಕಶ್ವಶ್ರೀ ಗಂಭೀರ ಗಾಯಗೊಂಡಿದ್ದು, ಅವರನ್ನು ದಾವಣಗೆರೆ ಎಸ್.ಎಸ್. ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಮಹಾದೇವಪುರದ ಪಾಳುಬಾವಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ – ಇಬ್ಬರು ಆರೋಪಿಗಳ ಬಂಧನ
ಇವರು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡವಾಣಿಯ ನಿವಾಸಿಗಳು ಎಂದು ತಿಳಿದುಬಂದಿದೆ. ರಾಣೇಬೆನ್ನೂರಿನಿಂದ ದಾವಣಗೆರೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

