ಹುಬ್ಬಳ್ಳಿ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 82.75 ಲಕ್ಷ ರೂ. ಹಣವನ್ನು ಕೇಶ್ವಾಪುರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಕೇಶ್ವಾಪುರ ಠಾಣೆ ಪೊಲೀಸರು ನಿನ್ನೆ ರಾತ್ರಿ ಭರ್ಜರಿ ಬೇಟೆಯಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಕುಸುಗಲ್ ರಸ್ತೆಯ ಆಕ್ಸ್‍ಫರ್ಡ್ ಕಾಲೇಜ್ ಬಳಿ ದಾಳಿ ಮಾಡಿದ ಪೊಲೀಸರು, ನಗದು ಸಮೇತ ಕಾರು ವಶಡಿಸಿಕೊಂಡಿದ್ದಾರೆ.
Advertisement
Advertisement
ವಿಜಯಪುರದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸ್ವಿಫ್ಟ್ ಡಿಜೈರ್ ಕಾರನ್ನು ತಡೆದು ಪರಿಶೀಲಿಸಿದಾಗ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ. ವಿಜಯಪುರದ ಭವಾನಿ ಟೀ ಸ್ಟಾಲ್ ಟಾಂಗಾ ಸ್ಟ್ಯಾಂಡ್ ಹತ್ತಿರದ ನಿವಾಸಿಗೆ ಸೇರಿದ ಕಾರು ಇದಾಗಿದ್ದು, ಚಾಲಕ ಗೋಕುಲರಾಮ ವೀರಾಮಾರಾಮ ರಬಾರಿ(34)ಯನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರಿಗೆ ಬಹುಮಾನ ಘೋಷಿಸಿದ ಜಗ್ಗೇಶ್
Advertisement
Advertisement
ಚಾಲಕನಿಂದ 82,75,100 ರೂಪಾಯಿ ನಗದು ಹಾಗೂ 5 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಎರಡು ಮೊಬೈಲ್ ಹ್ಯಾಂಡ್ ಸೆಟ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಇದು ಮಹಾನಗರ ಪಾಲಿಕೆ ಚುನಾವಣೆಗಾಗಿ ಸಾಗಿಸುತ್ತಿದ್ದ ಹಣವೋ ಅಥವಾ ಹವಾಲಾ ಹಣವೋ ಎಂಬುದು ತನಿಖೆಯಿಂದ ಪತ್ತೆಯಾಗಬೇಕಿದೆ.