ರಾಮನಗರ: ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲು ಡಿಕೆ ಶಿವಕುಮಾರ್ (DK Shivakumar) ಸಿದ್ಧರಾಗಿದ್ದಾರೆ ಎಂಬ ಮೂಲಕ ಪರೋಕ್ಷವಾಗಿ ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂಬ ಸುಳಿವನ್ನು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ (HC Balakrishna) ನೀಡಿದ್ದಾರೆ.
ಚನ್ನಪಟ್ಟಣದಲ್ಲಿ (Channapatna) ನಡೆದ ಕಾಂಗ್ರೆಸ್ (Congress) ಕೃತಜ್ಞತಾ ಸಮಾವೇಶದಲ್ಲಿ ಸ್ವಾಗತ ಭಾಷಣ ಮಾಡುವ ವೇಳೆ ಬಾಲಕೃಷ್ಣ ಈ ಮಾತನ್ನು ಆಡಿದ್ದಾರೆ. ಮುಂದುವರಿದು ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಕ್ಷೇತ್ರದ ಜನರು ನಮ್ಮ ಕೈ ಹಿಡಿದಿದ್ದಾರೆ. ನಮ್ಮ ಅಭ್ಯರ್ಥಿ ಮಾಜಿ ಪ್ರಧಾನಿಗಳ ಮೊಮ್ಮಗ ಅಲ್ಲ. ಸಾಧಾರಣ ಮೇಷ್ಟ್ರ ಮಗ, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚಿಂತನೆ ಇರುವ ವ್ಯಕ್ತಿ. ಇಂತಹ ವ್ಯಕ್ತಿಯನ್ನು ಕ್ಷೇತ್ರದ ಜನ ಆಯ್ಕೆ ಮಾಡಿ ಪಕ್ಷದ ಮರ್ಯಾದೆ ಹೆಚ್ಚಿಸಿದ್ದಾರೆ ಎಂದರು. ಇದನ್ನೂ ಓದಿ: ಕಾಲ್ತುಳಿತ ಪ್ರಕರಣ – ಮರಣೋತ್ತರ ಪರೀಕ್ಷೆ ನಡೆಸದೇ ಯುಪಿ ಸರ್ಕಾರದಿಂದ ಡೆತ್ ಸರ್ಟಿಫಿಕೇಟ್
Advertisement
Advertisement
ಕ್ಷೇತ್ರದ ಅಭಿವೃದ್ಧಿಗೆ ಚುನಾವಣೆಗೂ ಮುನ್ನವೇ 500 ಕೋಟಿ ಯೋಜನೆಗಳಿಗೆ ಚಾಲನೆ ಕೊಡಲಾಗಿತ್ತು. ಇವತ್ತು ಸಿದ್ದರಾಮಯ್ಯ ಬಂದಿದ್ದರೆ ಮತ್ತೊಂದಷ್ಟು ಅನುದಾನದ ಬಗ್ಗೆ ಮನವಿ ಮಾಡಬಹುದಿತ್ತು. ಬಜೆಟ್ ಬಳಿಕ ಮತ್ತೊಮ್ಮೆ ಅವರನ್ನು ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ಮಾಡೋಣ. ನಾವು ಚುನಾವಣಾ ಪೂರ್ವದಲ್ಲಿ ನಮ್ಮ ಜಿಲ್ಲೆಯ ಮಕ್ಕಳಿಗೆ ವೋಟ್ ಹಾಕಿ ಎಂದು ಕೇಳಿದ್ದೆವು. ಅದಕ್ಕೆ ಮನ್ನಣೆ ನೀಡಿ ಈ ಜಿಲ್ಲೆಯ ಮಕ್ಕಳ ಮರ್ಯಾದೆ ಉಳಿಸಿದ್ದೀರಿ. ಅದಕ್ಕಾಗಿ ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತೇವೆ. ಹಿಂದೆ 3 ತಿಂಗಳಿಗೋ, 6 ತಿಂಗಳಿಗೋ ಬರುವ ಶಾಸಕರಿದ್ದರು. ಈಗ ನಿತ್ಯ ಕ್ಷೇತ್ರದಲ್ಲೇ ಇರುವ ಶಾಸಕರು ಸಿಕ್ಕಿದ್ದಾರೆ ಎಂದು ಪರೋಕ್ಷವಾಗಿ ಹೆಚ್‌ಡಿಕೆಗೆ ಟಾಂಗ್ ನೀಡಿದರು. ಇದನ್ನೂ ಓದಿ: ತಿಂಗಳಿಂದ ಕುಡಿಯಲು ಕಲುಷಿತ ನೀರು – ಬನ್ನೇರುಘಟ್ಟ ಗ್ರಾಪಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ
Advertisement